ದೋಸ್ತಿ ಸರ್ಕಾರ ತಾನಾಗಿಯೇ ಬೀಳಲಿದೆ ಎಂದ ಕೇಂದ್ರ ಸಚಿವ..!!

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ ರಾಜ್ಯ ರಾಜಕಾರಣದಲ್ಲಿ ಎಲ್ಲವೂ ಕೂಡ ಬದಲಾದಂತೆ ಕಾಣುತ್ತಿದೆ..ಅತೃಪ್ತ ಶಾಸಕರು ಪಕ್ಷ ಬಿಟ್ಟು ಪಕ್ಷಕ್ಕೆ ಪಕ್ಷಾಂತರಗೊಳ್ಳುತ್ತಿದ್ದಾರೆ.. ಈ ನಡುವೆ ದೋಸ್ತಿ ಸರ್ಕಾರದ ಪತನಕ್ಕೆ ಮೂಹೂರ್ತ ಫಿಕ್ಸ್ ಮಾಡಲು ವಿರೋಧ ಪಕ್ಷದವರು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆ ಸರ್ಕಾರ ತಾನಾಗಿಯೇ ಬೀಳಲಿದೆ ಎಂದು ಕೇಂದ್ರ ಸಚಿವರೊಬ್ಬರು ಹೇಳಿದ್ದಾರೆ.
ಜನರ ತೀರ್ಪನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಿದ್ದವಿಲ್ಲ. ಹೀಗಾಗಿ ಜೆಡಿಎಸ್ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರವನ್ನು ನಡೆಸುತ್ತಿದೆ. ಶೀಘ್ರದಲ್ಲೇ ಈ ಮೈತ್ರಿ ಸರ್ಕಾರ ತಾನಾಗಿಯೇ ಬೀಳಲಿದೆ. ಸರ್ಕಾರ ಬಿದ್ದ ನಂತರ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರವಿದೆ. ಆದರೆ, ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಂತಹ ಸಮ್ಮಿಶ್ರ ಸರ್ಕಾರ ಇರುವುದಕ್ಕಿಂತ ಬೇಗ ಬಿದ್ದು ಹೋದ್ರೆ ಒಳ್ಳೆಯದು ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪರಸ್ವರ ಅವರವರೆ ಕಿತ್ತಾಡಿಕೊಂಡು ಪಕ್ಷದಿಂದ ಪಕ್ಷಕ್ಕೆ ಸ್ಥಳಾಂತರಗೊಳ್ಳುತ್ತಿದ್ದಾರೆ.. ಹಾಗಾಗಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡದಿದ್ದರು ತಾನಾಗಿಯೇ ದೋಸ್ತಿ ಸರ್ಕಾರ ಬೀಳಲಿದೆ ಎಂದಿದ್ದಾರೆ.
Comments