ರಾಜಕೀಯಕ್ಕೆ ಗುಡ್ ಬೈ ಹೇಳ್ತಾರ ಕಾಂಗ್ರೆಸ್ ನಾಯಕ...!!
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಿದೆ... ಇದೇ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಕೂಡ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು...ಇದೀಗ ಸೋಲನ್ನು ಅನುಭವಿಸಿರುವ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ವಕೀಲ ವೃತ್ತಿ ಮುಂದುವರೆಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ... ವೀರಪ್ಪ ಮೊಯ್ಲಿ ಅವರು ಕಪ್ಪು ಕೋಟು ಧರಿಸಿ ಹೈಕೋರ್ಟ್ ಗೆ ಆಗಮಿಸಿ, 2004 ರ ಪ್ರಕರಣವೊಂದರ ವಾದವನ್ನು ಮಂಡಿಸಿದ್ದಾರೆ.. ಹೀಗಾಗಿ ವೀರಪ್ಪ ಮೊಯ್ಲಿ ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರಾ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ..
ನಿನ್ನೆ ಬೆಳಗ್ಗೆ ಹೈಕೋರ್ಟ್ ಗೆ ಆಗಮಿಸಿದ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಹಿರಿಯ ವಕೀಲ ಬಿ.ವಿ ಆಚಾರ್ಯ, ಡಿ.ಎಲ್.ಎನ್ ರಾವ್ ಜೊತೆ ಕೆಲ ಕಾಲ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ವಕೀಲ ವೃತ್ತಿಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಂತಹ ಕಾರಣಕ್ಕೆ ವಕೀಲ ವೃತ್ತಿಯಿಂದ ದೂರವಿದ್ದ ಮೊಯ್ಲಿ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಮತ್ತೆ ವಕೀಲ ವೃತ್ತಿ ಪ್ರಾರಂಭ ಮಾಡಿದ್ದಾರೆ ಎಂಬ ಮಾತುಗಳೂ ಕೂಡ ಕೇಳಿಬರುತ್ತಿವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ವಿಷಯಗಳು ಬೆಳಕಿಗೆ ಬಂದಿದ್ದು ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ.. ಯಾರು ಯಾರು ರಾಜಕೀಯ ಕ್ಕೆ ಗುಡ್ ಬೈ ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Comments