ಸಿಎಂ ಕುಮಾರಸ್ವಾಮಿಯವರ ಬದಲಿಗೆ ಬೇರೆಯವರು ಸಿಎಂ ಆಗ್ತಾರ..!!

ಈಗಾಗಲೇ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಸಾಕಷ್ಟು ಅತೃಪ್ತ ಶಾಸಕರು ಪಕ್ಷಾಂತರವಾಗುತ್ತಿದ್ದಾರೆ. ಪಕ್ಷ ಬಿಟ್ಟು ಪಕ್ಷ ಬಿಟ್ಟು ಪಕ್ಷಕ್ಕೆ ಹಾರುತ್ತಿದ್ದಾರೆ.. ಇದರಿಂದ ಮೈತ್ರಿ ಸರ್ಕಾರದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿದೆ.. ಮೈತ್ರಿ ಸರ್ಕಾರ ಪತನವಾಗುತ್ತದೆ ಎನ್ನುತ್ತಿದ್ದರಿಗೆ ಅತೃಪ್ತ ಶಾಸಕರು ರಾಜೀನಾಮೆ ನೀಡುತ್ತಿರುವುದು ಬಲ ಬಂದಂತೆ ಆಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು, ಸಮ್ಮಿಶ್ರ ಸರ್ಕಾರದ ಬುಡ ಸಡಿಲಕೊಂಡಂತೆ ಕಾಣುತ್ತಿದೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಮೆರಿಕ ಪ್ರವಾಸದಲ್ಲಿರುವಾಗಲೇ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ಕಾಣುತ್ತಿವೆ.. ಇದೇ ವೇಳೆ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಅತೃಪ್ತ ಶಾಸಕರಿಗೆ ಸಂಪುಟ ಪುನರ್ ರಚನೆ, ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೇ, ಸಿಎಂ ಬದಲಾವಣೆ ಮಾಡಿ ಸರ್ಕಾರ ಉಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಕೂಡ ಕೇಳಿ ಬಂದಿವೆ. ಕಾಂಗ್ರೆಸ್ ಶಾಸಕ ಎಸ್. ರಾಮಪ್ಪನವರೇ ಈ ಮಾಹಿತಿಯನ್ನು ಹೊರ ಹಾಕಿದ್ದಾರೆ. ಒಟ್ಟಾರೆಯಾಗಿ ರಾಜಕೀಯ ವಲಯದಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಕಂಡರೂ ಕೂಡ ಒಳಗೊಳಗೆ ಎಲ್ಲರಲ್ಲಿಯೂ ಕೂಡ ಅಸಮಾಧಾನ ಮೂಡಿದೆ ಎನ್ನಬಹುದು...
Comments