`ಜೆಡಿಎಸ್' ನೂತನ ರಾಜ್ಯಾಧ್ಯಕ್ಷರು ಯಾರ್ ಗೊತ್ತಾ..?

04 Jul 2019 9:47 AM | Politics
645 Report

ಈಗಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ಪ್ರಾರಂಭವಾಗಿವೆ.. ಅದೇ ನಿಟ್ಟಿನಲ್ಲಿ ಅತೃಪ್ತ ಶಾಸಕರು ಪಕ್ಷಗಳನ್ನು ಬಿಡಲು ಮುಂದಾಗಿದ್ದಾರೆ..ಇತ್ತಿಚಿಗಷ್ಟೆ ಜೆಡಿಎಸ್ ನ ರಾಜ್ಯಾಧ್ಯಕ್ಷರಾದ ಹೆಚ್ ವಿಶ್ವನಾಥ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರ.. ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕಾರ್ಯಾಧ್ಯಕ್ಷ ಸ್ಥಾನಕ್ಕೆ ಇಂದು ಹೆಸರು ನೇಮಕವಾಗಲಿದ್ದು, ಜೆಡಿಎಸ್ ವರಿಷ್ಠ ಹೆಚ್. ಡಿ.ದೇವೇಗೌಡರು ಇಂದು ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.

ಶಾಸಕ ಹೆಚ್. ವಿಶ್ವನಾಥ್ ಅವರ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷರ ಹುದ್ದೆಗೆ ಮಧು ಬಂಗಾರಪ್ಪ ಅವರ ಹೆಸರು ಬಹುತೇಕ ಅಂತಿಮವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಘೋಷಣೆ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ವಿಶ್ವನಾಥ್ ಅವರಿಂದಲೇ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಲಾಗುವುದು ಎಂದು ದೇವೇಗೌಡರು ಹೇಳಿದ್ದರು.ತಿಳಿಸಿದ್ದಾರೆ. ಒಟ್ಟಿನಲ್ಲಿ ದೋಸ್ತಿಗಳಲ್ಲಿನ ಅತೃಪ್ತ ಶಾಸಕರು ಒಬ್ಬೊಬ್ಬರೆ ರಾಜೀನಾಮ ನೀಡುತ್ತಿರುವುದು ಮೈತ್ರಿ ಸರ್ಕಾರದ ಪತನಕ್ಕೆ ಎಡೆ ಮಾಡಿಕೊಡುತ್ತಿದೆ ಎಂಬುದು ಸಾಕಷ್ಟು ಶಾಸಕರ , ಸಚಿವರ ಮಾತಾಗಿದೆ.. ಒಟ್ಟಿನಲ್ಲಿ ರಾಜಕೀಯದಲ್ಲಿ ಇನ್ನೂ ಯಾವ್ಯಾವ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments