ನೂತನ ಸರ್ಕಾರ ರಚನೆಗೆ ಅಖಾಡಕ್ಕಿಳಿದ ಬಿಎಸ್ ವೈ..!
ಸದ್ಯ ಬಿಜೆಪಿ ಸರ್ಕಾರವು ಈಗಿರುವ ಮೈತ್ರಿ ಸರ್ಕಾರ ಯಾವಾಗ ಉರುಳುತ್ತದೆ ಎಂಬುದನ್ನು ಕಾಯುತ್ತಿದ್ದಾರೆ. ನೆನ್ನೆಯಷ್ಟು ದೋಸ್ತಿ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದೀಗ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆಯಿಂದ ಬಿಜೆಪಿ ಮ್ಯಾಜಿಕ್ ನಂಬರ್ ಪಡೆದಿದ್ದು, ನೂತನ ಸರ್ಕಾರ ರಚಿಸಲು ಬಿಎಸ್. ಯಡಿಯುರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಪ್ರಾರಂಭವಾಗಿವೆ ಎಂದು ಹೇಳಲಾಗುತ್ತಿದೆ.
ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ ನೀಡಿರುವ ಕಾರಣ ವಿಧಾನಸಭೆಯ ಸಂಖ್ಯಾಬಲ 2010 ಕ್ಕೆ ಕುಸಿದಿದ್ದು, 106 ಸದಸ್ಯರನ್ನು ಹೊಂದಿರುವ ಬಿಜೆಪಿ ಸರ್ಕಾರ ರಚಿಸಲು ಈಗಾಗಲೇ ಮಾಸ್ಟರ್ ಪ್ಲಾನ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ. ಸದ್ಯ ಕಾಂಗ್ರೆಸ್ ಜೆಡಿಎಸ್ 104 ಸಂಖ್ಯಾಬಲ ಹೊಂದಿದ್ದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದ್ದು ನೂತನ ಸರ್ಕಾರ ರಚನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ. ಒಟ್ಟಾರೆಯಾಗಿ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿದ್ದು ಮುಂಬರುವ ದಿನಗಳಲ್ಲಿ ಸರ್ಕಾರ ಯಾವ ರೀತಿ ರಚನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments