ಮನಸ್ಸು ಬದಲಾಯಿಸಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಹೋದ್ರಾ ಶಾಸಕಿ ಸೌಮ್ಯ ರೆಡ್ಡಿ.!?
ರಾಜ್ಯ ರಾಜ್ಯಕಾರಣದಲ್ಲಿ ರಾಜೀನಾಮೆ ಆಟ ಶುರುವಾಗಿದೆ.. ದೋಸ್ತಿಯ ಸಾಕಷ್ಟು ನಾಯಕರು ರಾಜೀನಾಮೆ ನೀಡುತ್ತಿದ್ದು ದೋಸ್ತಿಗೆ ಆತಂಕ ಶುರುವಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಮನನೊಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ದೋಸ್ತಿಯಲ್ಲಿ ಆತಂಕ ಶುರುವಾಗಿದೆ. ಬೆಂಗಳೂರಿನ ಪ್ರಭಾವಿ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ.
ಅಷ್ಟೆ ಅಲ್ಲದೆ ರಾಮಲಿಂಗಾರೆಡ್ಡಿ ಅವರ ಪುತ್ರಿ ಶಾಸಕಿ ಸೌಮ್ಯ ರೆಡ್ಡಿ, ಸೋಮವಾರದಂದು ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದು, ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸೋನಿಯಾ ಗಾಂಧಿಯವರಿಗೆ ಮಾಹಿತಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸೌಮ್ಯ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದ ಸೋನಿಯಾಗಾಂಧಿ, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ನೀಡಬೇಡಿ. ಹಾಗೆ ರಾಜೀನಾಮೆ ನೀಡಿರುವ ನಿಮ್ಮ ತಂದೆಯವರ ಮನವೊಲಿಸಿ ಎಂದು ಹೇಳಿದ್ದಾರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸೌಮ್ಯರೆಡ್ಡಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆಂದು ಹೇಳಲಾಗಿದೆ. ಒಟ್ಟನಲ್ಲಿ ಸೌಮ್ಯರೆಡ್ಡಿ ರಾಜೀನಾಮೆಯನ್ನು ನೀಡುತ್ತಾರೋ ಇಲ್ಲವೊ ಎಂಬುದನ್ನು ಕಾದು ನೋಡಬೇಕಿದೆ.
Comments