'ಆಪರೇಷನ್ ಕಮಲ'ದ ನಡುವೆ ಜೆಡಿಎಸ್ ಸಿಡಿಸಿತು ದೊಡ್ಡ ಬಾಂಬ್..!! ಏನ್ ಗೊತ್ತಾ..?

ರಾಜ್ಯ ರಾಜಕೀಯದಲ್ಲಿ ರಾಜೀನಾಮೆಯ ಪರ್ವ ಜೋರಾಗಿಯೇ ನಡೆಯುತ್ತಿದೆ..ಕಳೆದ ಸೋಮವಾರದಿಂದ ದೋಸ್ತಿಯ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಕಳೆದ ಮೂರು ನಾಲ್ಕು ದಿನಗಳಿಂದ ಕ್ಷಣಕ್ಕೊಂದು ಬೆಳವಣಿಗೆ ರಾಜಕೀಯ ವಲಯದಲ್ಲಿ ನಡೆಯುತ್ತಿದ್ದು, ಈಗಾಗಲೇ 14 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ದೋಸ್ತಿ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಂಭವವಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತಾದರೂ ರಾಜೀನಾಮೆ ನೀಡಿದವರ ಪೈಕಿ 8 ಶಾಸಕರ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲವೆಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ ನಂತರ ತಾತ್ಕಾಲಿಕವಾಗಿ ಸರ್ಕಾರ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ.ಅಷ್ಟೆ ಅಲ್ಲದೆ ತಮ್ಮ ನಾಮಪತ್ರ ಕ್ರಮಬದ್ಧವಾಗಿಲ್ಲವೆಂಬ ಕಾರಣಕ್ಕೆ ಮುಂಬೈನಲ್ಲಿರುವ ಎಂಟು ಮಂದಿ ಶಾಸಕರು ಇಂದು ಸಂಜೆಯೊಳಗಾಗಿ ಬೆಂಗಳೂರಿಗೆ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮತ್ತೊಮ್ಮೆ ತಮ್ಮ ರಾಜೀನಾಮೆ ಪತ್ರವನ್ನು ಖುದ್ದಾಗಿ ಸಲ್ಲಿಸಲಿದ್ದಾರೆಂದು ಹೇಳಲಾಗುತ್ತಿದೆ. ಇದರ ನಡುವೆ ಬಿಜೆಪಿ ವಿರುದ್ದ ಜೆಡಿಎಸ್ ಆರೋಪ ಮಾಡಿದ್ದು, ಕರ್ನಾಟಕದಲ್ಲಿ ಶಾಸಕರ ಖರೀದಿಗಾಗಿ ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಹೊಸ ಬಾಂಬ್ ಸಿಡಿಸಿದೆ. ಒಟ್ಟಿನಲ್ಲಿ ವಿರೋಧ ಪಕ್ಷಗಳ ಆರೋಪ ಪ್ರತ್ಯಾರೋಪಗಳ ನಡುವೆ ದೋಸ್ತಿ ಸರ್ಕಾರದ ಗತಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments