ದೋಸ್ತಿಗಳಿಂದಲೇ ಹೆಚ್ ಡಿ ರೇವಣ್ಣ ಗೆ ಬಿಗ್ ಶಾಕ್..!!
ಇತ್ತಿಚಿಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸುತ್ತಿವೆ.. ಅದರಲ್ಲೂ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲಂತೂ ಸಾಕಷ್ಟು ಬದಲಾವಣೆಗಳು ಕಾಣಿಸುತ್ತಿವೆ.. ಕಳೆದ ಮೂರು ನಾಲ್ಕು ದಿನಗಳಿಂದಲೂ ಕೂಡ ಅತೃಪ್ತ ಶಾಸಕರ ರಾಜೀನಾಮೆ ಆಟ ಜೋರಾಗಿಯೇ ಶುರುವಾಗಿದೆ. ಇದೀಗ ಹೆಚ್ ಡಿ ರೇವಣ್ಣಗೆ ಶಾಕ್ ನೀಡುವಂತ ಕೆಲಸವಾಗಿದೆ. ಹೆಚ್.ಡಿ. ರೇವಣ್ಣ ಕಣ್ಣಿಟ್ಟಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಪಾಲಾಗಿದೆ ಎಂದು ಹೇಳಲಾಗುತ್ತಿದೆ.
ನೀವು ಅಧ್ಯಕ್ಷ ಸ್ಥಾನ ನೀಡಲಿಲ್ಲ ಎಂದರೂ ಕೂಡ ತಮ್ಮ ದಾರಿಯನ್ನು ನೋಡಿಕೊಳ್ಳುತ್ತೇನೆ ಎಂದು ಭೀಮಾ ನಾಯಕ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿ ಭೀಮಾನಾಯಕ್ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಈ ವಿಷಯವಾಗಿ ಪ್ರತಿಕ್ರಿಯೆ ನೀಡಿದ್ದ ಭೀಮಾನಾಯ್ಕ್, ಮೊದಲು ನನಗೆ ಅಸಮಾಧಾನ ಇದ್ದದ್ದು ನಿಜ. ಆದರೆ ಈಗ ಅಸಮಾಧಾನ ಇಲ್ಲ. ಕೆಎಂಎಫ್ ಅಧ್ಯಕ್ಷರ ವಿಚಾರದಲ್ಲಿ ರಾಜೀ ಇಲ್ಲ. ಕಾಂಗ್ರೆಸ್ ಅತೀ ಹೆಚ್ಚು ನಿರ್ದೇಶಕರನ್ನು ಹೊಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಬಾರಿ ಕೆಎಂಎಫ್ ವಿಚಾರದಲ್ಲಿ ರಾಜೀ ಆಗುವ ಸಂಭವವಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಯಾವೆಲ್ಲಾ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Comments