ಮತ್ತಿಬ್ಬರು ಶಾಸಕರ ರಾಜೀನಾಮೆ: ಬಿಎಸ್ ವೈ ಹೊಸ ಬಾಂಬ್..!!!
ದೋಸ್ತಿ ಸರ್ಕಾರಕ್ಕೆ ಕಂಟಕ ಬಂದಂತೆ ಆಗಿದೆ..ಈಗಾಗಲೇ 13 ಶಾಸಕರು ದೋಸ್ತಿ ಸರ್ಕಾರದಿಂದ ಹೊರ ಬಂದಿದ್ದಾರೆ.. ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ.. ಸಿಎಂ ಕುಮಾರಸ್ವಾಮಿಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದರು.. ಅಷ್ಟೆ ಅಲ್ಲದೆ ಮೈತ್ರಿಗೆ ಬೆಂಬಲ ನೀಡಿದ್ದಂತಹ ಪಕ್ಷೇತರ ಶಾಸಕರಿಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನಾವು ಬಹುಮತ ಹೊಂದಿದ್ದೇವೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ಮಾಜಿ ಸಿಎಂ ಬಿಎಸ್‌ವೈ ಇಂದು ತಿಳಿಸಿದರು.
ರಾಜ್ಯಪಾಲರ ಭೇಟಿ ನಂತರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಸಂದರ್ಭದಲ್ಲಿ ಇಂದು ಸಂಜೆಯೊಳಗೆ ಮತ್ತಿತ್ತರು ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂಬ ಮಾತನ್ನು ಹೇಳಿದ್ದಾರೆ.. ಇನ್ನು ಮೈತ್ರಿ ಸರ್ಕಾರದ ಬಹುಮತ 103ಕ್ಕೆ ಕುಸಿದಿದ್ದು, ಬಿಜೆಪಿ 107 ಶಾಸಕರನ್ನು ಹೊಂದಿದೆ. ಸರ್ಕಾರವೇ ಅಲ್ಪಮತಕ್ಕೆ ಕುಸಿದ ಕಾರಣ ಅಧಿವೇಶನ ಹೇಗೆ ನಡೆಸುತ್ತಾರೆ. ಸ್ಪೀಕರ್ ವಿಳಂಬ ನೀತಿಯನ್ನು ಅನುಸರಿಸಬಾರದು ಅಂತ ಸ್ಪೀಕರ್ ಮೇಲೆ ಒತ್ತಡ ಹೇರಿದರು. ಇನ್ನು ಡಿ.ಕೆ.ಶಿವಕುಮಾರ್ ಮುಂಬೈ ಹೋಟೆಲ್ ಮುಂದೆ ಧರಣಿಗೆ ಕುಳಿತಿದ್ದಕ್ಕೆ ಬಿಜೆಪಿಯವರನ್ನು ದೂರಬಾರದು ಎಂದು ತಿಳಿಸಿದ್ದರು... ಮುಂಬೈನಲ್ಲಿ ಬೀಡು ಬಿಟ್ಟಿರುವ ಅತೃಪ್ತ ಶಾಸಕರು ಯಾವಾಗ ತಮ್ಮ ನಿಲುವನ್ನು ಬದಲಾಯಿಸಿಕೊಳ್ಳುತ್ತಾರೋ ಕಾದು ನೋಡಬೇಕಿದೆ..
Comments