ಬಿಜೆಪಿ ಸರ್ಕಾರ ರಚನೆಯಾಗುತ್ತಾ..? ದೋಸ್ತಿಗಳ ಪತನ ಗ್ಯಾರೆಂಟಿನಾ…?!!

ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡು ಬರುತ್ತಿವೆ.. ಒಂದು ಕಡೆ ದೋಸ್ತಿಯ ಅತೃಪ್ತ ಶಾಸಕರು ರಾಜೀನಾಮೆ ಆಟ ಆಡಿದರೆ, ಮತ್ತೊಂದು ಕಡೆ ಬಿಜೆಪಿ ಪಕ್ಷವು ಸರ್ಕಾರ ರಚಿಸಲು ಹರ ಸಾಹಸ ಪಡುತ್ತಿದೆ… ಈಗಾಗಲೇ ದೋಸ್ತಿ ಯ ಸಾಕಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ.. ಆದರೆ ಡಿಕೆಶಿ ಅದನ್ನು ತಡೆಯಲು ಮುಂದಾಗಿದ್ದಾರೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಸರ್ಕಸ್ ನಡೆಸುತ್ತಿದ್ದರೆ, ಇತ್ತ ಬಿಜೆಪಿ ನಾಯಕರು ಸರ್ಕಾರ ರಚನೆಗೆ ಕಸರತ್ತು ಜೋರಾಗಿಯೇ ನಡೆಯುತ್ತಿದೆ.
ಬಿಜೆಪಿ ಪಾಳಯದಲ್ಲಿ ಭಾನುವಾರ ರಾತ್ರಿ ಸಾಕಷ್ಟು ಚಟುವಟಿಕೆಗಳು ನಡೆದಿದ್ದು, ಮೈತ್ರಿ ಸರ್ಕಾರವು ಪತನವಾಗುವುದರಲ್ಲಿ ಪಕ್ಕಾ ಎಂದು ಶಾಸಕರಲ್ಲಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ತುಂಬಿದ್ದು, ಸದನದಲ್ಲಿ ಯಾವ ರೀತಿ ನಡೆದುಕೊಳ್ಳಬೇಕೆಂದು ಶಾಸಕರಿಗೆ ಕಿವಿ ಮಾತು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರೆಸಾರ್ಟ್ ನಲ್ಲಿ ಬಿಜೆಪಿ ಶಾಸಕರ ಜೊತೆಗೆ ಸಭೆ ನಡೆಸಿ ಮೈತ್ರಿ ಸರ್ಕಾರ ಪತನಗೊಳ್ಳಲಿದ್ದು, ಬಿಜೆಪಿ ಸರ್ಕಾರ ರಚನೆಗೆ ಮಾಡುವುದರಲ್ಲಿ ಯಾವುದೇ ಅನುಮಾನ ಬೇಡ. ಹೀಗಾಗಿ ಎಲ್ಲರೂ ನಿರಾತಂಕವಾಗಿರಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಪಕ್ಷವಿದ್ದರೆ, ಮತ್ತೊಂದು ಕಡೆ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ಸರ್ಕಾರ ಅತೃಪ್ತ ಶಾಸಕರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಸರ್ಕಾರ ಯಾವ ರೀತಿಯಾಗಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments