ಬಿಜೆಪಿಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ HDK
ರಾಜ್ಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಒಂದು ಕಡೆ ಆದರೆ ಮತ್ತೊಂದು ಕಡೆ ಐಎಂಎ ವಂಚನೆ ಪ್ರಕರಣ ಬಾರಿ ಸುದ್ದಿಯಲ್ಲಿದೆ.. ಐಎಂಎ ವಂಚನೆ ಪ್ರಕರಣ ದಲ್ಲಿ ಆರೋಪಿಯಾಗಿರುವ ಶಿವಾಜಿನಗರದ ಶಾಸಕ ರೋಷನ್ ಬೇಗ್ ರಾಜ್ಯದಿಂದ ಪರಾರಿಯಾಗಲು ಬಿಜೆಪಿ ನಾಯಕರು ಸಹಾಯ ಮಾಡಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮಾತು ರಾಜಕೀಯ ವಲಯದಲ್ಲಿ ಹೆಚ್ಚು ಸುದ್ದಿಯಾಗುತ್ತಿದೆ. ಹಣವನ್ನು ಹೂಡಿಕೆ ಮಾಡಿ ಸಾಕಷ್ಟು ಜನರು ಮೋಸ ಹೋಗಿದ್ದಾರೆ.
ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ತನಿಖೆಯನ್ನು ಎದುರಿಸುತ್ತಿದ್ದರು. ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಾರ್ಟಡ್ ಪ್ಲೈಟ್ ನಲ್ಲಿ ಮುಂಬೈಗೆ ಹೋಗುವಾಗ ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಕೂಡ ಅವರ ಜೊತೆಗಿದ್ದರು. ಎಸ್ ಐಟಿ ತನಿಖಾ ತಂಡ ರೋಷನ್ ಬೇಗ್ ಅವರನ್ನು ಬಂಧಿಸಿದ ತಕ್ಷಣ ಸಂತೋಷ್ ಅಲ್ಲಿಂದ ಹೋಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.. ಐಎಂಎ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಪರಾರಿಯಾಗಲು ಬಿಜೆಪಿ ಸಹಾಯ ಮಾಡುತ್ತಿದೆ. ಇದರಲ್ಲಿ ಬಿಜೆಪಿಯ ಕೈವಾಡವಿದೆ ಎನಿಸುತ್ತಿದೆ ಎಂದು ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments