`ಕೈ' ಶಾಸಕರಿಗೆ ರಕ್ಷಣೆ ಕೊಡಿ ಎಂದ ಕಾಂಗ್ರೆಸ್ ಶಾಸಕ..!!

ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಇದೀಗ ರಾಜೀನಾಮೆ ಆಟದ ನಂತರ ವಿಶ್ವಾಸ ಮತಯಾಚನೆಗೆ ಗುರುವಾರ ಸಮಯ ನಿಗಧಿಯಾಗಿದೆ. ಇದೆಲ್ಲದರ ನಡುವೆ ಇದೀಗ ಮತ್ತೊಂದು ಆಟ ಪ್ರಾರಂಭವಾಗಿದೆ. ಕಾಂಗ್ರೆಸ್ ಶಾಸಕರಿಗೆ ರಕ್ಷಣೆನೀಡಲು ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ ಮತ್ತು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ..
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಂತರ ಮಾಧ್ಯಮವರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ವಿಶ್ವಾಸಮತಯಾಚನೆ ಮಾಡಲು ನಮಗೆ ಇನ್ನೂ ಎರಡು ದಿನ ಬಾಕಿ ಇದೆ.. ಕಾಲವೇ ಎಲ್ಲವನ್ನು ಕೂಡ ನಿರ್ಧಾರ ಮಾಡುತ್ತದೆ.. ರಾಜೀನಾಮೆ ಕೊಟ್ಟಿರುವ ಶಾಸಕರು ವಾಪಸ್ ಬರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಅದಷ್ಟೆ ಅಲ್ಲದೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ಬೆದರಿಕೆ ಇದ್ದು, ತಾವು ಮಾಡುತ್ತಿರುವ ಕೃತ್ಯಕ್ಕೆ ಶಾಸಕರನ್ನು ಫಾಲೋ ಮಾಡುತ್ತಿದ್ದಾರೆ. ಹೀಗಾಗಿ ನಮ್ಮ ಶಾಸಕರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಅತೃಪ್ತ ಶಾಸಕರು ದೋಸ್ತಿಗಳಿಗೆ ಗುಡ್ ಬೈ ಹೇಳುತ್ತಿರುವುದೇ ಸದ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ., ಮತಯಾಚನೆ ಬಳಿಕ ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments