ದೋಸ್ತಿಗಳ ವಿಶ್ವಾಸಮತ ಯಾಚನೆಯ ನಡುವೆ ಅಮಿತ್ ಶಾರನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್..!! ಕಾರಣ ಏನ್ ಗೊತ್ತಾ..?
ಕಳೆದ ಹದಿನದು ದಿನಗಳಿಂದಲೂ ಕೂಡ ಮೈತ್ರಿ ಸರ್ಕಾರವು ಅತೃಪ್ತ ಶಾಸಕರನ್ನು ಸೆಳೆಯುವಲ್ಲಿ ಬ್ಯುಸಿಯಾಗಿದ್ದಾರೆ.. ಮನವೊಲಿಸುವಲ್ಲಿ ವಿಫಲರಾದ ಕಾರಣ ಸದ್ಯ ವಿಶ್ವಾಸ ಮತ ಯಾಚನೆ ಮಾಡಲು ಮುಂದಾಗಿದ್ದರು.. ಆದರೆ ಕಳೆದ ಗುರುವಾರದಿಂದಲೂ ಕೂಡ ವಿಶ್ವಾಸಮತ ಯಾಚನೆಯನ್ನು ಮುಂದೂಡುತ್ತಲೇ ಬರುತ್ತಿದ್ದಾರೆ.. ವಿಶ್ವಾಸ ಮತ ಯಾಚನೆ ಮಾಡಲು ದೋಸ್ತಿ ನಾಯಕರು ಹಿಂದೇಟು ಹಾಕುತ್ತಿದ್ದಾರೆ.
ಸದ್ಯ ಇದೆಲ್ಲದರ ನಡುವೆ ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಯಾಗಿ ಮಂಡ್ಯ ಜಿಲ್ಲೆಯಲ್ಲಿನ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಕೊಡಿಸುವಂತೆ ಮನವಿಯನ್ನು ಸಲ್ಲಿಸಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬಗ್ಗೆ ಸುಮಲತಾ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಿಳಿಸಿದ್ದು,ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೆನೆ ಎಂದು ಬರೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕೆಲವು ಕಡೆ ಮುಂಗಾರು ಕೈ ಕೊಟ್ಟಿದೆ. ಮಂಡ್ಯದ ರೈತರು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಆದರೆ ಸರಿಯಾಗಿ ಮಳೆಯಾಗದ ಕಾರಣ ಕಾವೇರಿ ನದಿಯೂ ತುಂಬಿಲ್ಲ. ಇದರಿಂದ ರೈತರಿಗೆ ತೀವ್ರ ಆತಂಕ ಶುರುವಾಗಿದೆ. ಹೀಗಾಗಿ ಸುಮಲತಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಯ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ., ರಾಜ್ಯದಲ್ಲಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆ ಮತ್ತೊಂದು ಕಡೆ ಮಂಡ್ಯದ ಸಂಸದೆ ಸುಮಲತಾ ಕೇಂದ್ರ ಸಚಿವರ ಬಳಿ ಮಂಡ್ಯ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ನೀಡಲು ಓಡಾಡುತ್ತಿದ್ದಾರೆ.
Comments