HDK ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದ ಜೆಡಿಎಸ್ ಶಾಸಕ..!! ಯಾರ್ ಗೊತ್ತಾ..?

ಮೈತ್ರಿ ಸರ್ಕಾರವು ಪತನವಾದ ಮೇಲೆ ಸದ್ಯ ಎಲ್ಲಾ ಉಪಚುನಾವಣೆಯ ಕಡೆ ಗಮನ ಕೊಡುತ್ತಿದ್ದಾರೆ.. ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲವಾದರೆ ಉಪಚುನಾವಣೆಯಲ್ಲಿ ಜೆಡಿಎಸ್ ಐದರಿಂದ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಶಾಸಕ ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಜೆಡಿಎಸ್ ಗೆ ಸಾಕಷ್ಟು ಸದಸ್ಯರು ಬೆಂಬಲವನ್ನು ನೀಡುತ್ತಿದ್ದಾರೆ..
ನಾಗಮಂಗಲದ ಶಾಸಕರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಶ್ ಗೌಡ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ನೇಮಿಸುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು, ಒಟ್ಟಿನಲ್ಲಿ ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದ್ದಾರೆ.. ಇನ್ನೂ ರಾಜಕೀಯ ವಲಯದಲ್ಲಿ ಯಾವೆಲ್ಲಾ ರೀತಿಯ ಬದಲಾವಣೆಗಳು ಆಗುತ್ತಿರುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Comments