ಬಿಜೆಪಿ ಸರ್ಕಾರದ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ ಅನಿತಾ ಕುಮಾರಸ್ವಾಮಿ..!! ಕಾರಣ ಏನ್ ಗೊತ್ತಾ..?
ಸದ್ಯ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ಕಾಣಿಸುತ್ತಿವೆ..ದೋಸ್ತಿ ಸರ್ಕಾರ ಪತನಗೊಂಡು ವಾರವೇ ಕಳೆಯಿತು.. ಇದೀಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಹಾಗೂ ರಾಮನಗರದ ಶಾಸಕಿ ಅನಿತಾ ಕುಮಾರಸ್ವಾಮಿ ಮಾತ್ರ ಸರ್ಕಾರದ ಬಗ್ಗೆ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.. ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಲ್ಲಿ ಒಂದು ರೀತಿಯ ನಡುಕ ಹುಟ್ಟಿಸಿದ್ದಂತಾಗಿದೆ..
ಈ ನಡುವೆ ಶಾಸಕಿ ಅನಿತಾ ಕುಮಾರಸ್ವಾಮಿಯ ಮಾತುಗಳು ಆಡಿ ಎಲ್ಲರಿಗೂ ಶಾಕ್ ಕೊಟ್ಟಂತೆ ಆಗಿದೆ.. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿ ತೊಂದರೆ ಕೊಡುತ್ತದೆ ಎಂದು ನನಗನ್ನಿಸುವುದಿಲ್ಲ. ಬಿಜೆಪಿ ಅಂತಹ ಸಣ್ಣ ರಾಜಕೀಯ ಮಾಡೋದಿಲ್ಲ ಎಂಬ ವಿಶ್ವಾಸ ನನಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಅಂತಹ ಕೆಲಸ ಮಾಡಿಲ್ಲ. ಹೀಗಾಗಿ ನಮಗೆಲ್ಲ ಅನುದಾನದ ಕೊರತೆಯಾಗಲಿದೆ ಎಂದು ಅನ್ನಿಸುತ್ತಿಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಿಜೆಪಿಯ ಬಗ್ಗೆ ಈ ರೀತಿಯ ಒಳ್ಳೆಯ ಮಾತುಗಳನ್ನ ಆಡಿರುವುದು ನಿಜಕ್ಕೂ ಖುಷಿಯ ವಿಚಾರವೇ ಸರಿ..
Comments