ವಿಧಾನಸಭಾ ಉಪಚುನಾವಣೆಯ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಿಖಿಲ್ ಕುಮಾರಸ್ವಾಮಿ..!!

ದೋಸ್ತಿ ಸರ್ಕಾರ ಪತನವಾದ ಮೇಲೆ ರಾಜ್ಯ ರಾಜಕೀಯದಲ್ಲಿ ತುಂಬಾ ಬದಲಾವಣೆಗಳು ಆಗುತ್ತಿವೆ.. ಇದೇ ಹಿನ್ನಲೆಯಲ್ಲಿ ವಿಧಾನಸಭಾ ಉಪಚುನಾವಣೆಯನ್ನು ನಡೆಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಿಧಾನಸಭಾ ಉಪಚುನಾವಣೆಯ ಹಿನ್ನೆಲಯಲ್ಲಿ ಕೆ ಆರ್ ಪೇಟೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು… ನಿಖಿಲ್ ಅವರನ್ನು ಕೆ ಆರ್ ಪೇಟೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಜೆಡಿಎಸ್ ಶಾಸಕರು ಒತ್ತಾಯಿಸುತ್ತಿದ್ದರು.
ಆದರೆ ವಿಧಾನಸಭಾ ಉಪಚುನಾವಣೆಯುಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಅಂತ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅವರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡುತ್ತ ಈ ವಿಷಯದ ಬಗ್ಗ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡುತ್ತ ಚುನಾವಣೆಗೆ ಮತ್ತೆ ಮತ್ತೆ ನನ್ನ ಹೆಸರೇಕೆ ಕೇಳಿಬರುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ನಾನೇ ಕಾರ್ಯಕರ್ತರ ತಿಳಿಸಿದ್ದಾರೆ. . 17 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಾನು ಪಾದಯಾತ್ರೆ ಮಾಡುತ್ತೇನೆ ಎಂಬುದೆಲ್ಲಾ ಊಹಾಪೋಹದ ಮಾತು.. . ಯಾವ ವಿಚಾರವಾಗಿ ಪಾದಯಾತ್ರೆ ಮಾಡುತ್ತೇವೆ ಎಂಬುದು ಮುಖ್ಯ. ಸುಮ್ಮಸುಮ್ಮನೆ ಪಾದಯಾತ್ರೆ ಮಾಡಲು ಆಗುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ನಿಖಿಲ್ ವಿರುದ್ದ ಅಭಿಷೇಕ್ ಅವರನ್ನ ನಿಲ್ಲಿಸಲಾಗುತ್ತದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದ್ದವು. ಇದಕ್ಕೆಲ್ಲಾ ಸದ್ಯ ನಿಖಿಲ್ ತೆರೆ ಎಳೆದಿದ್ದಾರೆ.
Comments