ರಾಜಕೀಯ ನಿವೃತ್ತಿ ಪಡೆಯುತ್ತಾರ ಮಾಜಿ ಸಿಎಂ ಹೆಚ್ಡಿಕೆ..!!
ಸದ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡು ಬರುತ್ತಿವೆ.. ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ದೋಸ್ತಿ ಸರ್ಕಾರ ಪತನಗೊಂಡ ಮೇಲೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟ ಕುಮಾರಸ್ವಾಮಿಯವರ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ.. ಸಿಎಂ ಸ್ಥಾನದಿಂದ ಹೆಚ್ ಡಿ ಕುಮಾರಸ್ವಾಮಿಯವರು ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ರಾಜಕೀಯ ನಿವೃತ್ತಿ ಬಗ್ಗೆ ಸುದ್ದಿಗಳು ಹರಿದಾಡಿತ್ತು. ಈ ವಿಚಾರಕ್ಕೂ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಸ್ಪಷ್ಟನೆಯನ್ನು ನೀಡಿದ್ದಾರೆ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ವಿಷಯದ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ಮಾಹಿತಿ ನೀಡುತ್ತ ಈ ವಿಷಯವನ್ನು ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತಾ ನಮ್ಮ ಸಮ್ಮಿಶ್ರ ಸರ್ಕಾರ ಪತನದ ನಂತರ ಕಾಂಗ್ರೆಸ್ ಹೈಕಮಾಂಡ್ ನಮ್ಮೊಂದಿಗೆ ಮೈತ್ರಿ ಮುಂದುವರೆಸುವ ಇರಾದೆ ಹೊಂದಿದ್ದರು. ಆದರೆ ನಮ್ಮ ಪಕ್ಷದ ಕೆಲ ಸ್ಥಳೀಯ ನಾಯಕರಿಗೆ ಮೈತ್ರಿ ಇಷ್ಟವಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ. ರಾಜಕೀಯದಲ್ಲಿ ಪಾರದರ್ಶಕತೆ ಇಂದಿನ ಕಾಲಘಟ್ಟದಲ್ಲಿ ಮರೆಯಾಗಿದೆ ಎಂದು ಮಾಜಿ ಸಿಎಂ ಹೆಚ್ಡಿಕೆ ಬೇಸರ ವ್ಯಕ್ತಪಡಿಸಿದರು. ಒಟ್ಟಿನಲ್ಲಿ 14 ತಿಂಗಳಿನಿಂದ ನಡೆಸಿದ ಸರ್ಕಾರ ಪತನಗೊಂಡಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.
Comments