ಸಚಿವ ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್..? ಯಾವಾಗ ಗೊತ್ತಾ..?

ಸದ್ಯ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ.. ಉತ್ತರ ಕರ್ನಾಟಕದ ನಾನಾ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಸಾಕಷ್ಟು ಪ್ರದೇಶಗಳು ಜಲಾವೃತಗೊಂಡಿದ್ದು ಕುಟುಂಬಗಳು ಬೀದಿ ಪಾಲಾಗಿವೆ. ಅಮಿದ್ ಷಾ ಬೆಳಗಾವಿಗೆ ಬಂದ ಹಿನ್ನಲೆಯಲ್ಲಿ ಸೇನೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಅಮಿತ್ ಷಾ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಥ್ ನೀಡಿದ್ದಾರೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಅಮಿತ್ ಶಾ ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ.. ಅಷ್ಟೆ ಅಲ್ಲದೆ ಆಗಸ್ಟ್ 16 ರಂದು ದೆಹಲಿಗೆ ಬರುವಂತೆ ಅಮಿತ್ ಶಾ ಸೂಚನೆ ನೀಡಿದ್ದು, ಅಂದು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಆಗಸ್ಟ್ 16 ರ ನಂತರ 2 -3 ದಿನದಲ್ಲೇ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ರೀತಿಯಾಗಿಯೇ ಪ್ರತಿಪಕ್ಚಗಳು ಟೀಕೆಗೆ ಗುರಿಯಾಗುವುದು.. ರಾಜ್ಯದ ಪರಿಸ್ಥಿತಿಯನ್ನು ನೋಡವುದು ಬಿಟ್ಟು ಸಚಿವ ಸ್ಥಾನಕ್ಕೆ ಹಾತೊರೆಯುತ್ತಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಾಮಾನ್ಯವಾಗಿರುತ್ತದೆ.
Comments