ಮಧ್ಯಂತರ ಪರಿಹಾರಕ್ಕೆ ದೇವೇಗೌಡರ ಒತ್ತಾಯ..!! ಪರಿಹಾರದ ಮೊತ್ತವೆಷ್ಟು ಗೊತ್ತಾ..?
ರಾಜ್ಯದ ಜನತೆ ಸದ್ಯ ಮಳೆಯಿಂದಾಗಿ ತತ್ತರಿಸಿ ಹೋಗಿದೆ… ಜನರ ಬದುಕು ನೆಲ ಕಚ್ಚಿದೆ.. ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಮಂದಿ ನೆರವಾಗಿದ್ದಾರೆ.. ಬೇಕಾದ ದಿನನಿತ್ಯದ ಸಾಮಾಗ್ರಿಗಳನ್ನು ಬದಗಿಸುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೂಡ ಪರಿಹಾರ ಘೋಷಣೆ ಮಾಡಿದೆ. ಇದರ ನಡುವೆ ಜೆಡಿಎಸ್ ವರಿಷ್ಟರಾದ ಮಾಜಿ ಪ್ರಧಾನಿ ದೇವೆಗೌಡರು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ ಮಾಡುತ್ತಿದ್ದಾರೆ..
ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ದು, ಕೂಡಲೇ ರಾಜ್ಯಕ್ಕೆ 5000 ಕೋಟಿ ರೂ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಒತ್ತಾಯಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಗೌಡರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು 5000 ಕೋಟಿ ರೂ. ಮಧ್ಯಂತರ ಪರಿಹಾರ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಪ್ರಧಾನಿಯವರನ್ನು ಖುದ್ದಾಗಿ ಭೇಟಿ ಮಾಡಿ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡುತ್ತೇನೆ. ಪ್ರವಾಹ ಪರಿಸ್ಥಿತಿ ಕಡಿಮೆಯಾದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದೇನೆ. ವೈಯಕ್ತಿಕವಾಗಿ 2 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ರಾಜಕೀಯವನ್ನು ಬದಿಗೊಟ್ಟು ಜನರ ಸೇವೆಯಲ್ಲಿ ಈ ವಯಸ್ಸಿನಲ್ಲಿಯೂ ಶ್ರಮಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರವೇ ಸರಿ.
Comments