ಹೆಚ್.ಡಿ. ರೇವಣ್ಣ ಸೇರಿ ಸ್ಟಾರ್ ನಟರ ಫೋನ್ ಟ್ಯಾಪ್..!? ಇದನ್ನ ಮಾಡಿಸಿದ್ದು ಯಾರ್ ಗೊತ್ತಾ..?

ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ… ಒಬ್ಬರ ಮೇಲೋಬ್ಗರು ಆರೋಪಗಳು ಪ್ರತ್ಯಾರೋಪಗಳು ಮಾಡುತ್ತಲೇ ಇದ್ದಾರೆ.. ದೋಸ್ತಿ ಸರ್ಕಾರ ಪತನವಾದ ಮೇಲೆ ಸಾಕಷ್ಟು ವಿಚಾರಗಳು ಬಹಿರಂಗವಾಗುತ್ತಿವೆ… ಇದೀಗ ಪೋನ್ ಕದ್ದಾಲಿಕೆ ವಿಚಾರ ಕೇಳಿ ಬರುತ್ತಿದೆ.. ಈ ವಿಚಾರ ಸದ್ಯ ರಾಜಕೀಯ ವಲಯದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.. ದೋಸ್ತಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಹೆಚ್ ಡಿ ಕುಮಾರಸ್ವಾಮಿ ಅವರು ಸಾಕಷ್ಟು ಮಂದಿಯ ಫೋನ್ ಟ್ಯಾಪಿಂಗ್ ಮಾಡಿದ್ದರು ಎನ್ನಲಾಗುತ್ತಿದೆ..
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸೇರಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಫೋನ್ ಗಳನ್ನು ಕದ್ದಾಲಿಸಲಾಗಿತ್ತು ಎಂದು ಹೇಳಲಾಗುತ್ತಿದೆ.. ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯ ಅಭ್ಯರ್ಥಿ ಆಗಿದ್ದರೆ. ನಿಖಿಲ್ ಗೆ ಪ್ರತಿಸ್ಪರ್ಧಿಯಾಗಿ ಸುಮಲತಾ ಅಂಬರೀಶ್ ಅಖಾಡಕ್ಕಿಳಿದ್ದು ಪ್ರಬಲ ಪೈಪೋಟಿ ಕೊಟ್ಟಿದ್ದರು.. ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ದರ್ಶನ್ ಮತ್ತು ಯಶ್ ಜೋಡಿ ಭರ್ಜರಿ ಪ್ರಚಾರ ನಡೆಸಿದ್ದರು. ಈ ವೇಳೆ ಇವರಿಬ್ಬರ ಫೋನ್ ಕರೆ ಸೇರಿ ಮೂರು ತಿಂಗಳ ಅವಧಿಯಲ್ಲಿ ಸುಮಾರು 900 ನಂಬರುಗಳ ಸಂಭಾಷಣೆಯನ್ನು ಕದ್ದಾಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ದೋಸ್ತಿ ಸರ್ಕಾರ ಪತನವಾದ ಮೇಲೆ ಕೆಲವೊಂದು ಮಾಹಿತಿಗಳು ಬಹಿರಂಗವಾಗುತ್ತಿವೆ..
Comments