ತಮ್ಮ ಪಕ್ಷವನ್ನು ಗೆಲ್ಲಿಸಲು ದೇವೆಗೌಡರ ಮಾಸ್ಟರ್ ಪ್ಲ್ಯಾನ್…!!!
ದೋಸ್ತಿ ಸರ್ಕಾರ ಅಧಿಕಾರ ಕಳೆದುಕೊಂಡು ತಿಂಗಳು ಕಳೆಯುತ್ತಾ ಬರುತ್ತಿದೆ.. ದೋಸ್ತಿ ಸರ್ಕಾರದ ಅತೃಪ್ತ ಶಾಸಕರೇ ಮೈತ್ರಿ ಪತನವಾಗಲೂ ಕಾರಣ ಎಂಬುದು ಎಲ್ಲರಿಗೂ ಕೂಡ ತಿಳಿದಿರುವ ವಿಷಯವೇ .. ಇದೀಗ ದೋಸ್ತಿ ಪತನವಾದ ಮೇಲೆ ಸಾಕಷ್ಟು ವಿಷಯಗಳು ಚರ್ಚೆಯಾಗುತ್ತಿವೆ.. ಮೈತ್ರಿ ಸರ್ಕಾರದ ಪತನದ ಬೆನ್ನಲ್ಲೇ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಂಬರುವ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಲು ಸಕಲ ತಯಾರಿ ನಡೆಸಿದ್ದು, ಪಕ್ಷ ಸಂಘಟನೆಗಾಗಿ ಸರಣಿ ಸಭೆಯನ್ನು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ದೇವೇಗೌಡರು ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಾಮರಾಜನಗರ ಸರಣಿ ಸಭೆ ನಡೆಸಲು ಮುಂದಾಗಿದ್ದಾರೆ... ದೇವೇಗೌಡರು ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಾಮರಾಜನಗರ, ಬಳ್ಳಾರಿ ಸೇರಿದಂತೆ 14 ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಕರೆದಿದ್ದಾರೆ. ಸೋಮವಾರದಿಂದ ಸರಣಿ ಸಭೆ ನಡೆಸಲಿದ್ದಾರೆ. ಈ ಮೂಲಕ ದೇವೇಗೌಡರು ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಮುಂಬರುವ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಉದ್ದೇಶದಿಂದ ಸರಣಿ ಸಭೆ ನಡೆಸುತ್ತಿದ್ದಾರೆ.. ಲೋಕಸಭಾ ಚುನಾವಣೆಯಲ್ಲಿ ಸೋತ ದೇವೆಗೌಡರು ಮತ್ತೆ ಪಕ್ಷವನ್ನು ಗೆಲ್ಲಿಸಲು ಮಾಸ್ಟರ್ ಫ್ಲ್ಯಾನ್ ಮಾಡುತ್ತಿದ್ದಾರೆ.
Comments