ಮಾಜಿ ಸಿಎಂ ಸಿದ್ದುಗೆ ಹೆಚ್ ಡಿ ಕುಮಾರಸ್ವಾಮಿ ಟಾಂಗ್..!!
ಸದ್ಯ ರಾಜಕೀಯದಲ್ಲಿ ಇದೀಗ ಸದ್ದು ಮಾಡುತ್ತಿರುವ ವಿಷಯವೆಂದರೆ ಪೋನ್ ಟ್ಯಾಪಿಂಗ್… ಪೋನ್ ಕದ್ದಾಲಿಕೆ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.. ರಾಜ್ಯ ರಾಜಕೀಯದಲ್ಲಿ ಹೆಚ್ಚು ಸಂಚಲನವನ್ನು ಮೂಡಿಸಿರುವ ಫೋನ್ ಕದ್ದಾಲಿಕೆ ಪ್ರಕರಣ ವಿಚಾರ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವೆ ವಿರಸಕ್ಕೆ ಕಾರಣವಾಗುವಂತಿದೆ ಎನ್ನಲಾಗುತ್ತಿದೆ.. ವಾರದಿಂದಲೂ ಕೂಡ ಪೋನ್ ಟ್ಯಾಪಿಂಗ್ ಸದ್ದು ಮಾಡುತ್ತಲೆ ಇದೆ. ಇದೇ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಮುಖ್ಯಮಂತ್ರಿಯಾದ ಹೆಚ್ ಡಿ ಕುಮಾರಸ್ವಾಮಿಯವರು ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಮನವಿ ಮೇರೆಗೆ ಫೋನ್ ಕದ್ದಾಲಿಕೆ ತನಿಖೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐಗೆ ವಹಿಸಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ, ಫೋನ್ ಕದ್ದಾಲಿಕೆ ತನಿಖೆಯನ್ನು ಸಿದ್ದರಾಮಯ್ಯ ಮನವಿ ಮೇರೆಗೆ ಸಿಎಂ ಸಿಬಿಐಗೆ ವಹಿಸಿದ್ದಾರೆ. ಇದಕ್ಕಾಗಿ ಸಿದ್ದರಾಮಯ್ಯನವರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಗಿ ತಿಳಿಸಿದ್ದಾರೆ. ಇಷ್ಟು ದಿನ ದೋಸ್ತಿಗಳಾಗಿದ್ದ ಇವರ ನಡುವೆ ರಾಜಕೀಯವು ಒಂದಷ್ಟು ವೈಮನಸ್ಸುಗಳನ್ನು ಮೂಡಿಸುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ತಿರುಗಿ ಬೀಳಲು ಸಜ್ಜಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಮೈತ್ರಿ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಆಪ್ತ ಶಾಸಕರ ರಾಜೀನಾಮೆ ಕಾರಣವೆಂದು ಹೇಳಲಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನ ಹೊಂದಿದ್ದು, ಅವರೊಂದಿಗೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಇಳಿಯಬಹುದೆಂದು ಹೇಳಲಾಗಿದೆ. ಒಟ್ಟಾರೆಯಾಗಿ ರಾಜ್ಯ ರಾಜಕೀಯದಲ್ಲಿ ಯಾವುದು ಮೊದಲಿನಂತಿಲ್ಲ.. ಆಡಳಿತ ಪಕ್ಷಗಳು ಮತ್ತು ವಿರೋಧ ರಾಜಕೀಯ ಪಕ್ಷಗಳಲ್ಲಿ ಸಾಕಷ್ಟು ಬದಲಾವಣೆಗಳು ಕಾಣುತ್ತಿವೆ..
Comments