ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಯಾರು ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹೆಚ್ ಡಿಡಿ..!!
ಸದ್ಯ ರಾಜಕೀಯದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿವೆ.. ಕೆಲ ಹಿಂದಷ್ಟೆ ಮೈತ್ರಿ ಸರ್ಕಾರವು ಪತನಗೊಂಡಿದೆ..ದೋಸ್ತಿಗಳಲ್ಲಿನ ಕೆಲ ಅತೃಪ್ತ ಶಾಸಕರು ಸಮ್ಮಿಶ್ರಕ್ಕೆ ಕೈ ಕೊಟ್ಟು ಸದ್ಯ ಅನರ್ಹರಾಗಿದ್ದಾರೆ. ಇದೀಗ ದೋಸ್ತಿ ಸರ್ಕಾರ ಪತನವಾಗುವುದಕ್ಕೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ ಮಾಜಿ ಪ್ರಧಾನಿ ದೇವೆಗೌಡರು.. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರುಸಂದರ್ಶನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ಆದರೆ, ಹೈಕಮಾಂಡ್ ಮೈತ್ರಿ ನಿರ್ಧಾರಕ್ಕೆ ಸಿದ್ದರಾಮಯ್ಯ ಒಪ್ಪಿಗೆ ಇರಲಿಲ್ಲ. ನನ್ನ ಮತ್ತು ಕುಮಾರಸ್ವಾಮಿ ಜೊತೆಗೆ ಬಗೆಹರಿಯದ ಸಮಸ್ಯೆಗಳು ಸಿದ್ದರಾಮಯ್ಯಗಿತ್ತು. ಅವರು ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಲ್ಲಿ ನೋಡಲು ಆಗುತ್ತಿರಲಿಲ್ಲ.. ಇನ್ನು ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಲ್ಲಿ ನಾನು ಮತ್ತು ಮಂಡ್ಯದಲ್ಲಿ ನಿಖಿಲ್ ಸೋಲಲು ಸಿದ್ದರಾಮಯ್ಯ ಕಾರಣ. ನಮ್ಮ ವಿರುದ್ಧ ಕೆಲಸ ಮಾಡಿದ ಕಾಂಗ್ರೆಸ್ ನವರಿಗೆ ಅವರು ನೋಟಿಸ್ ನೀಡಲಿಲ್ಲ. ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಹೋರಾಡಲು ಯಾರೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಒಟ್ಟಿನಲ್ಲಿ ದೋಸ್ತಿ ಸರ್ಕಾರ ಪತನವಾಗಲೂ ಸಿದ್ದರಾಮಯ್ಯನೇ ಕಾರಣ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೆಗೌಡರು ಮುಂದಿನ ಚುನಾವಣೆಗೆ ಮಾಸ್ಟರ್ ಪ್ಲ್ಯಾನ್ ಮಾಡುತ್ತಿರುವುದಂತೂ ಸುಳ್ಳಲ್ಲ…
Comments