2 ನೇ ಹಂತದ ಸಚಿವ ಸಂಪುಟ..!! ಯಾರಿಗೆ ಯಾವ ಸ್ಥಾನ..?

ಈಗಾಗಲೇ ರಾಜ್ಯದಲ್ಲಿ ಒಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ ನಡೆದಿದೆ.. ಆ ಸಂಪುಟದಲ್ಲಿ 17 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದ್ದ ಖುಷಿಯಲ್ಲಿ ಕೆಲವರಿದ್ದರೆ, ಸಚಿವ ಸ್ಥಾನ ಕೈ ತಪ್ಪಿದ್ದಾಗಿ ಕೆಲವರು ಬಿಎಸ್ವೈ ಮೇಲೆ ಬೇಸರ ವ್ಯಕ್ತ ಪಡಿಸಿದ್ದರು. ಇದೀಗ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯಲಿದ್ದು, ಅಸಮಾಧಾನಿತ ಶಾಸಕರನ್ನೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ 17 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಸಚಿವ ಸ್ಥಾನದ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೂ ಸಚಿವ ಸ್ಥಾನ ನೀಡುವ ಸಂಬಂಧ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. 2 ನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಂಗಳವಾರ ನಡೆಯಲಿದೆ ಎನ್ನಲಾಗಿದ್ದು, ಅಸಮಾಧಾನಿತ ಶಾಸಕರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ ಹಾಗೂ ಕರಾವಳಿ ಜಿಲ್ಲೆಗಳ ಒಬ್ಬರಿಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೊದಲನೇ ಸುತ್ತಿನ ಸಚಿವ ಸಂಪುಟದಲ್ಲಿ ಒಟ್ಟಿನಲ್ಲಿ ಸಚಿವ ಸ್ಥಾನ ತಪ್ಪಿದ ಕೆಲವು ಶಾಸಕರು ಈಗಲಾದರೂ ಸಂಪುಟ ಸ್ಥಾನ ಸಿಗಲಿದೆ ಎಂಬ ಭರವಸೆಯಲ್ಲಿದ್ದಾರೆ. ಅಷ್ಟೆ ಅಲ್ಲದೆ ದೋಸ್ತಿಗಳಿಗೆ ಕೈಕೊಟ್ಟು ಸದ್ಯ ಅನರ್ಹರಾಗಿರುವ ಶಾಸಕರ ಕಡೆಯೂ ಕೂಡ ಬಿಎಸ್ವೈ ಸರ್ಕಾರ ಗಮನ ಹರಿಸಬೇಕಾಗಿದೆ. ಇದೆಲ್ಲವನ್ನು ಬಿಎಸ್ ವೈ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Comments