`ಉಪಮುಖ್ಯಮಂತ್ರಿ' ಹುದ್ದೆ ಪಟ್ಟಿ ಫೈನಲ್..!?
ರಾಜ್ಯ ರಾಜಕೀಯದಲ್ಲಿ ಸದ್ಯ ಉಪಮುಖ್ಯಮಂತ್ರಿಯ ರೇಸ್ ಶುರುವಾಗಿದೆ. ಈ ರೇಸ್ ನಲ್ಲಿ ಮೂವರ ಹೆಸರು ಕೇಳಿ ಬಂದಿದೆ… ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾರಿಗೆಲ್ಲಾ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬುದು ಇಂದೇ ನಿರ್ಧಾರವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಪಾಲರಿಗೆ ಉಪಮುಖ್ಯಮಂತ್ರಿಗಳ ಪಟ್ಟಿಯನ್ನು ರವಾನೆ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ ಹಾಗೂ ಲಕ್ಷ್ಮಣ್ ಸವದಿ ಅವರಿಗೆ ಡಿಸಿಎಂ ಹುದ್ದೆ ಪಕ್ಕಾ ಎನ್ನಲಾಗಿದೆ.ಇನ್ನು ನೂತನ ಸಚಿವರ ಖಾತೆ ಹಂಚಿಕೆ ವಿಚಾರವೂ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಇಂದು ಸಂಜೆ ಅಥವಾ ನಾಳೆ ಸಚಿವರ ಖಾತೆಗಳು ನಿರ್ಧಾರವಾಗಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಒಟ್ಟಿನಲ್ಲಿ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದೆ.. ಇದೇ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳನ್ನ ಎದುರಿಸಿರುವ ಬಿಎಸ್ವೈ ಮುಂದೆ ಯಾವ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
Comments