ಉಗ್ರ ಹೋರಾಟ ಮಾಡ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ..?

ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಸರ್ಕಾರ ಪತನಗೊಂಡು ತಿಂಗಳು ಕಳೆದಿದೆ. ಬಿಎಸ್ವೈ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳು ಜಾರಿಗೆ ಬಂದಿವೆ…ಇದರ ನಡುವೆ ಇಂದಿರ ಕ್ಯಾಂಟೀನ್ ಯೋಜನೆಯನ್ನು ಕೈ ಬಿಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮುಚ್ಚಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಬಡವರಿಗಾಗಿ ಜಾರಿಗೆ ತಂದಿರುವ ಯೋಜನೆ ಆಗಿದೆ. ಇದನ್ನು ಮುಚ್ಚುವ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ, ಮುಚ್ಚಿದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಂದಿರಾ ಕ್ಯಾಂಟೀನ್ ನಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಕಡಿಮೆ ದರದಲ್ಲಿ ಆಹಾರ ಸೇವಿಸುತ್ತಿದ್ದಾರೆ. ಅಂತಹ ಯೋಜನೆ ಕೈಬಿಟ್ಟರೇ ಸರ್ಕಾರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ…ಒಟ್ಟಿನಲ್ಲಿ ಬಡವರಿಗಾಗಿ ಇರುವ ಈ ಯೋಜನೆಯನ್ನು ಕೈ ಬಿಟ್ರೆ ಹೋರಾಟ ಮಾಡಲಾಗುವುದು ಎಂದಿದ್ದಾರೆ.. ಸದ್ಯ ಇರುವ ರಾಜ್ಯ ಸರ್ಕಾರ ಯಾವ ಯೋಜನೆಗಳನ್ನು ಕೈ ಬಿಡುತ್ತದೆಯೋ, ಅಥವಾ ಇನ್ಯಾವ ಯೋಜನೆಯನ್ನು ಸೇರಿಸುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.
Comments