ಡಿ.ಕೆ. ಶಿವಕುಮಾರ್ ಬಂಧನ: ರಾಮನಗರ ಜಿಲ್ಲೆಯಲ್ಲಿ ಮುಂದುವರೆದ ಪ್ರತಿಭಟನೆ
ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ದೋಸ್ತಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಕಾರಣವಾದವರಲ್ಲಿ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇಳುವ ಡಿಕೆ ಶಿವಕುಮಾರ್ ಕೂಡ ಕಾರಣರಾಗಿದ್ದರು.. ದೋಸ್ತಿ ಸರ್ಕಾರ ಪತನವಾದ ಮೇಲೆ ಸಾಕಷ್ಟು ಬದಲಾವಣೆಗಳನ್ನು ರಾಜಕೀಯ ವಲಯದಲ್ಲಿ ಕಾಣಬಹುದಾಗಿದೆ.. ಕಾಂಗ್ರೆಸ್ ನ ಟ್ರಬಲ್ ಶೂಟರ್ ಸದ್ಯ ಕಂಬಿಯ ಹಿಂದೆ ಇದ್ದಾರೆ. ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದನ್ನು ಖಂಡಿಸಿ, ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸದ್ಯ ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಮನಗರ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೆ.13 ವರೆಗೆ ಡಿಕೆಶಿಯನ್ನು ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡುತ್ತಿದ್ದಂತೆ ರಾಮನಗರ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ರಾಮನಗರದಲ್ಲಿ ಬಂದ್ ಮುಂದುವರೆಯಲಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನ ಆದೇಶ ನೀಡಿದ್ದಾರೆ. ಇಡಿ ಅಧಿಕಾರಿಗಳ ವಶದಲ್ಲಿರುವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದೇ ಹಿನ್ನಲೆಯಲ್ಲಿ ಅವರು ಇನ್ನೂ ಸೆ.13 ರವರೆಗೂ ಕೂಡ ಇಡಿ ಕಸ್ಟಡಿಯಲ್ಲಿಯೆ ಇರುತ್ತಾರೆ.
Comments