ಉಪಚುನಾವಣೆಯಲ್ಲಿ ಜೆಡಿಎಸ್ ಸೋಲು ಖಚಿತ ಎಂದ ಜೆಡಿಎಸ್ ನ ಪ್ರಭಾವಿ ಸಚಿವ..!!

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜಕೀಯ ವಲಯದಲ್ಲಿ ಹೆಚ್ಚು ಬದಲಾವಣೆಗಳು ಆಗುತ್ತಿರುವುದು ಚರ್ಚೆಗೆ ಕಾರಣವಾಗಿದೆ ಸದ್ಯ ರಾಜಕೀಯದಲ್ಲಿ ಉಪಚುನಾವಣೆಯ ಮಾತು ಕೂಡ ಕೇಳಿ ಬರುತ್ತಿದೆ… ಡಿಕೆಶಿ ಬಂಧನಕ್ಕೂ ಮತ್ತು ಉಪ ಚುನಾವಣೆಯ ಲಿಂಕ್ ಇದೆ ಎನ್ನುವಂತೆ ಚರ್ಚೆಗಳು ನಡೆಯುತ್ತಿವೆ. ಇದೀಗ ಹುಣಸೂರು ಉಪಚುನಾವಣೆ ನಡೆದರೆ ಜೆಡಿಎಸ್ ಸೋಲುತ್ತದೆ ಎಂದು ಚುನಾವಣೆಗೂ ಮುನ್ನವೆ ಜಿಟಿ ದೇವೆಗೌಡರು ಭವಿಷ್ಯ ನುಡಿದಿದ್ದಾರೆ. ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ, ಜೆಡಿಎಸ್ ಅಭ್ಯರ್ಥಿ ಸೋಲುತ್ತಾರೆ ಎಂದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಜಿಟಿಡಿ ಈ ವಿಷಯ ಹೇಳಿದ್ದಾರೆ. ನಾನು ಸಚಿವನಾಗಿದ್ದಾಗ ಕ್ಷಣ ಕ್ಷಣಕ್ಕೂ ಅವಮಾನ ಮತ್ತು ನೋವು ಉಣ್ಣುತ್ತಿದ್ದೆ. ಈಗ ನಾನು ಬಹಳ ಆರಾಮಾಗಿದ್ದೇನೆ. ಯಾವ ಅವಮಾನವು ಇಲ್ಲ, ನೋವು ಇಲ್ಲ. ಈಗ ಜೆಡಿಎಸ್ ಸಂಘಟನೆ ಪಟ್ಟಿಯಲ್ಲಿ ನನ್ನ ಹೆಸರಿಲ್ಲದ ಕಾರಣ ತಲೆಯ ಮೇಲಿದ್ದ ದೊಡ್ಡ ಬಂಡೆ ಇಳಿದಂತಾಗಿದೆ. ಚುನಾವಣೆ ರಾಜಕಾರಣದಿಂದ ನಿವೃತ್ತಿ ಪಡೆದು ಮಗನಿಗೆ ಬಿಟ್ಟುಕೊಡುತ್ತಿದ್ದೇನೆ. ಈಗ ಬಡವರ ಸೇವೆ ಮಾಡಿಕೊಂಡು ನೆಮ್ಮದಿಯಾಗಿದ್ದೇನೆ ಎಂದು ತಿಳಿಸಿದರು.. ಒಟ್ಟಾರೆಯಾಗಿ ರಾಜಕೀಯದಿಂದ ನಿವೃತ್ತಿ ಪಡೆದುಕೊಂಡು ಸದ್ಯ ಜನರ ಸೇವೆ ಮಾಡಿಕೊಂಡು ಆರಾಮಾಗಿದ್ದೇನೆ ಎಂದು ತಿಳಿಸಿದ್ದಾರೆ.
Comments