ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ..!! ಮಾಜಿ ಮುಖ್ಯಮಂತ್ರಿ HDK ಗೈರು..!!!
ಕೆಲ ದಿನಗಳಿಂದ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಇರುವುದನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿಯಾದ ಹೆಚ್ ಡಿ ಕುಮಾರಸ್ವಾಮಿಯವರು ಗೈರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ಸ್ವಕ್ಷೇತ್ರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಚನ್ನಪಟ್ಟಣಕ್ಕೆ ಹೋಗಿರುವ ಹೆಚ್ ಡಿಕೆ, ವಿವಿಧ ಕಾರ್ಯಕ್ರಮ, ಕೆಡಿಪಿ ಸಭೆ ಸೇರಿದಂತೆ ಹಲವು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಸಂಜೆ ಮೈಸೂರಿಗೆ ಹೋಗಲಿದ್ದಾರೆ. ಇಂದು ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈಗಾಗಲೇ ನ್ಯಾಷನಲ್ ಕಾಲೇಜು ಗ್ರೌಂಡ್ ಹೊರ ಭಾಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ಡಿಕೆಶಿ ಬಂಧನವನ್ನು ಖಂಡಿಸಿ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಆ ಕಡೆ ಇಡಿ ಅಧಿಕಾರಿಗಳು ಇನ್ನೂ ಕೆಲ ದಿನಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ಬಂಧನಕ್ಕೆ ಕೊಡಿ ಎಂದು ಕೇಳುತ್ತಿದ್ದಾರೆ. ಈಗಾಗಲೇ ಡಿಕೆಶಿ ಮಗಳಿಗೂ ಕೂಡ ಸಮನ್ಸ್ ಅನ್ನು ಜಾರಿ ಮಾಡಲಾಗಿದೆ.
Comments