ಉಪಸಮರದಲ್ಲಿ ಎಲ್ಲ ಕ್ಷೇತ್ರಗಳಿಂದಲೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ..!!!
ಸದ್ಯ ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಸಮರ ಜೋರಾಗಿಯೇ ನಡೆಯುತ್ತಿದೆ.. ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದಲೂ ಕೂಡ ಜೆಡಿಎಸ್ ಅಭ್ಯರ್ಥಿಗಳು ಕೂಡ ಸ್ಪರ್ಧಿಸುತ್ತಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೆಗೌಡರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೆಗೌಡರು ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಂದಲೂ ಕೂಡ ಕಣಕ್ಕಿಳಿಸುವ ಬಗ್ಗೆ ಕುಮಾರಸ್ವಾಮಿ ತಿಳಿಸಿದ್ದಾರೆ.. ಅಭ್ಯರ್ಥಿಗಳನ್ನು ಕಣಕ್ಕಿಳಿಸುವಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.. ಇನ್ನು ಅನರ್ಹ ಶಾಸಕರ ಅರ್ಜಿ ವಿಚಾರಣೆ ಅ. 22 ರಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದ್ದು, ನ್ಯಾಯಾಲಯ ಯಾವ ತೀರ್ಪು ಕೊಡುತ್ತದೆಯೋ ನೋಡೋಣ, ಮಾಜಿ ವಿಧಾನಸಭಾಧ್ಯಕ್ಷರ ತೀರ್ಪನ್ನು ನ್ಯಾಯಾಲಯ ಎತ್ತಿ ಹಿಡಿದರೆ ಚುನಾವಣೆ ನಡೆಯುತ್ತದೆ. ಇಲ್ಲವಾದರೆ ಚುನಾವಣೆ ನಡೆಯುವುದಿಲ್ಲ ಎಂದು ತಿಳಿಸಿದರು.. ಒಟ್ಟಾರೆಯಾಗಿ ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾದ ಶಾಶಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಆದರೂ ಕೂಡ ಪಕ್ಷ ಬಿಡುವವರು ಕೂಡ ಇನ್ನೂ ಕಡಿಮೆಯಾಗಿಲ್ಲ… ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೆ ಇದ್ದಾರೆ.. ಮುಂದೆ ರಾಜಕೀಯದಲ್ಲಿ ಯಾವೆಲ್ಲಾ ಬದಲಾವಣೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
Comments