ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ..!! ಯಾವಾಗ ಗೊತ್ತಾ..?

22 Oct 2019 10:34 AM | Politics
428 Report

ಈಗಾಗಲೇ ದೋಸ್ತಿ ಸರ್ಕಾರ ಪತನವಾಗುವುದಕ್ಕೆ ಅನರ್ಹ ಶಾಸಕರೇ ಕಾರಣ ಎಂಬುದು ಎಲ್ಲರಿಗೂ ಕೂಡ ತಿಳಿದೆ ಇದೆ, ಸದ್ಯ ಅನರ್ಹ ಶಾಸಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 17 ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ. ಈ ಮೂಲಕ ವಿಚಾರಣೆ ಬುಧವಾರಕ್ಕೆ ನಿಗದಿಯಾಗಿದೆ.

ಕಾಂಗ್ರೆಸ್ ಪರ ವಕೀಲ ಕಪೀಲ್ ಸಿಬಲ್ ಅವರು ವಿಚಾರಣೆಯನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಕೋರ್ಟಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ಸೋಮವಾರ ನಡೆಯಬೇಕಿದ್ದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಹೀಗಾಗಿ ಅನರ್ಹ ಶಾಸಕರು ತಮ್ಮ ಅರ್ಜಿ ವಿಚಾರಣೆಗೆ ಮತ್ತೆ ಎರಡು ದಿನ ಕಾಯುವಂತಾಗಿದೆ. ಈಗಾಗಲೇ ಉಪಚುನಾವಣೆ ಸುದ್ದಿ ಹರಿದಾಡುತ್ತಿದೆ.. ಸದ್ಯ ರಾಜಕೀಯವಲಯದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವವರ ಸಂಖ್ಯೆ ಹೆಚ್ಚಾಗಿದೆ. ಆರೋಪ ಪ್ರತ್ಯಾರೋಪಗಳ ನಡುವೆ ರಾಜಕೀಯದ ಗತಿ ಮುಂದೆ ಯಾವ ರೀತಿ ಬದಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments