ಜಿಲ್ಲಾಧಿಕಾರಿಗಳ ಜೊತೆ ಇಂದು ಸಿಎಂ ವಿಡಿಯೋ ಸಂವಾದ..!!
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮತ್ತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದ್ದು , ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಲಿದ್ದಾರೆ. ಅಲ್ಲಿನ ಸ್ಥಿತಿಗತಿ, ಜನ –ಜೀವನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಸಂವಾದ ನಡೆಸಲಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ವಿಡಿಯೋ ಸಂವಾದ ಆರಂಭಿಸಲಿದ್ದಾರೆ. ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಅನಾಹುತಗಳ ಬಗ್ಗೆ ಬಿಎಸ್ ಯಡಿಯೂರಪ್ಪ ವಿಡಿಯೋ ಕಾಲ್ ವಳೆ ಮಾಹಿತಿ ಪಡೆಯಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ಹೀಗಾಗಿ ಅನೇಕ ಗ್ರಾಮಗಳು ಜಲಾವೃತಗೊಂಡಿವೆ. ಪರಿಹಾರ ಕಾರ್ಯಗಳನ್ನು ತ್ವರಿತ ರೀತಿಯಲ್ಲಿ ಮಾಡುವಂತೆ ಅವರು ಸೂಚನೆ ನೀಡುವ ಸಾಧ್ಯತೆ ಇದೆ.
Comments