ಮೈತ್ರಿ ಸರ್ಕಾರದ ಎಂಜಿನಿಯರ್‌ಗಳ ನೇಮಕ ಪ್ರಕ್ರಿಯೆ ರದ್ದುಗೊಳಿಸಿದ ಬಿಜೆಪಿ ಸರ್ಕಾರ

ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್‌ಗಳ ನೇಮಕಾತಿಗಾಗಿ ಮೈತ್ರಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಪ್ರಕ್ರಿಯೆಯನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರದ್ದುಪಡಿಸಿ.
ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ ಕೈಗೊಳ್ಳಲಾಗಿದ್ದ ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿನ 870 ಎಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆಯನ್ನು, ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರದ್ದುಗೊಳಿಸಿದೆ. ಈ ಹುದ್ದೆಗಳು ಸೇರಿದಂತೆ ಒಟ್ಟು 1 ಸಾವಿರ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ನಡೆಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ, ಇಲಾಖಾ ಮೂಲಗಳಿಂದ ತಿಳಿದಿದೆ.
600 ಸಹಾಯಕ ಎಂಜಿನಿಯರ್‌ಗಳು, 325 ಕಿರಿಯ ಎಂಜಿನಿಯರ್‌ಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ನಡೆಸಲಿದೆ. ಈ ಸಂಬಂಧ ಕೆಪಿಎಸ್‌ಸಿಗೆ ಲೋಕೋಪಯೋಗಿ ಇಲಾಖೆ ನವೆಂಬರ್ 27ರಂದು ಪತ್ರ ಬರೆದಿದೆಎಂದು ತಿಳಿದುಬಂದಿದೆ.
Comments