ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಟ್ಟ ಸಿಎಂ ಬಿ.ಎಸ್. ಯಡಿಯೂರಪ್ಪ

ಶಿವಸೇನೆ ಜತೆಗಿನ ಮೈತ್ರಿ ಕಡಿದುಕೊಂಡ ಬಿಜೆಪಿ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಮುಂದಾಗಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿ, ನಿಪ್ಪಾಣಿ, ಕಾರವಾರ ಗಡಿ ಭಾಗವನ್ನು 'ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ' ಎನ್ನುವ ಮೂಲಕ ಹೊಸ ವಿವಾದ ಸೃಷ್ಟಿಸಿದರು, ಇದಕ್ಕೆಬಿ ಎಸ್ ಯಡಿಯೂರಪ್ಪ ಸರಿಯಾಗಿ ತಿರುಗೇಟು ಕೊಟ್ಟಿದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದಿಂಚು ಜಾಗವನ್ನು ಬಿಟ್ಟುಕೊಡುವುದಿಲ್ಲ. ಮಹಾರಾಷ್ಟ್ರ ಕರ್ನಾಟಕ ರಾಜ್ಯಗಳಿಗೆ ಯಾವ ಯಾವ ಪ್ರದೇಶಗಳು ಸೇರಬೇಕು ಎಂಬುದು ಹಿಂದೆಯೇ ನಿರ್ಧಾರವಾಗಿದೆ ಇದೀಗ ಮಹಾರಾಷ್ಟ್ರ ಸರ್ಕಾರ ಅನಾವ್ಯಶ್ಯಕವಾಗಿ ಗೊಂದಲ ಸೃಷ್ಟಿಸುತ್ತಿದೆ ಕರ್ನಾಟಕದ ಜನತೆ ಶಾಂತಿ ಕಾಪಾಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು.
Comments