ಬಿಎಸ್ ಯಡಿಯೂರಪ್ಪ ಇಂದು ದೆಹಲಿಗೆ ಯಾರಿಗೆ ಸಚಿವ ಸ್ಥಾನ!!

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಹೈಕಮಾಂಡ್ ಬುಲಾವ್ ಮೇರೆಗೆ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 11-45 ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು ಮಧ್ಯಾಹ್ನ 2-40ಕ್ಕೆ ದೆಹಲಿ ತಲುಪಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಬಿಎಸ್ ವೈ ಭೇಟಿಯಾಗಲಿದ್ದಾರೆ. ಅವರ ಭೇಟಿಯ ವೇಳೆ ಕರ್ನಾಟಕದ ರಾಜಕೀಯ ಪರಿಸ್ಥಿತಿ, ಸಂಪುಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದು ಗೆದ್ದಿರುವ 11 ಶಾಸಕರು ಮತ್ತು ಸೋತಿರುವ ಇಬ್ಬರಿಗೆ ಸಚಿವ ಪಟ್ಟ ನೀಡಿ ಮಾತು ಉಳಿಸಕೊಳ್ಳಲು ಬಿಎಸ್ ವೈ ಸತತ ಪರಿಶ್ರಮ ಪಡುತ್ತಿದ್ದಾರೆ. ಉಳಿದಂತೆ ಮೂಲ ಬಿಜೆಪಿ ಶಾಸಕರಾದ ಉಮೇಶ್ ಕತ್ತಿ, ರಾಮದಾಸ್, ಅರವಿಂದ ಲಿಂಬಾವಳಿ ಮುಂತಾದವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಯಾರ ಹೆಸರು ಅಂತಿಮ ಪಟ್ಟಿಯಲ್ಲಿರಲಿದೆ ಎಂದು ಕಾದು ನೋಡಬೇಕಷ್ಟೆ.
Comments