ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ

ಕೊರೊನಾದಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 2 ಹಂತಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 22ರಂದು ಮೊದಲ ಹಂತ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.
ಪ್ರತಿ ಜಿಲ್ಲೆಯಲ್ಲೂ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನವಾಗಲಿದೆ. 5762 ಗ್ರಾಮ ಪಂಚಾಯಿತಿಗಳ 92,121 ಸದಸ್ಯ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಯಲ್ಲಿ 2930 ಗ್ರಾ.ಪಂಗಳಲ್ಲಿ ಹಾಗೂ ಎರಡನೇ ಹಂತದ ಚುನಾವಣೆ 2832 ಗ್ರಾ.ಪಂಗಳಲ್ಲಿ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ.
Comments