ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ: ಎಚ್ಡಿ ಕುಮಾರಸ್ವಾಮಿ
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಚ್ಡಿ ಕುಮಾರಸ್ವಾಮಿ ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ದ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದರು.
ದ್ವಜದ ಬಗ್ಗೆ ಅಷ್ಟೊಂದು ಹೇಳುವ ಕಾಂಗ್ರೆಸ್ ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾ ಸುಮ್ಮನೆ ಸದನದ ಕಲಾಪ ಹಾಳು ಮಾಡುವುದು ಬಿಟ್ಟು ಕಾಂಗ್ರೆಸ್ ಕೋರ್ಟಿಗೆ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದರು.
ಮಂತ್ರಿಯ ರಾಜೀನಾಮೆ ಪಡೆಯಬೇಕು ಎಂಬ ಪ್ರತಿಷ್ಠೆಗೆ ಬಿದ್ದಿರುವ ಕಾಂಗ್ರೆಸ್ ಪಕ್ಷದ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಇದೊಂದು ರೀತಿಯ ‘ರಾಜಕೀಯ ಕೋವಿಡ್ ‘ ಈ ವಿನಾಶಕಾರಿ ಕೋವಿಡ್ ಅನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದರು.
Comments