ಇಂಡಿಯಾ-ಪಾಕ್ ಕ್ರಿಕೆಟ್ ಸಮರ.. ‘ಭಾರತ ತಂಡ ಗೆಲ್ಲಲಿದೆ’

ಇಸ್ಲಮಾಬಾದ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಜೂನ್ ೪ರಂದು ನಡೆಯುವ ಸಾಂಪ್ರದಾಯಿಕ ಎದುರಾಳಿ ತಂಡಗಳಾಗಿರುವ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಈಗಾಗಲೇ ಅಭಿಮಾನಿಗಳಲ್ಲಿ ರೋಚಕವಾಗಿದೆ.
ಈ ಮಧ್ಯೆ ಪಾಕಿಸ್ತಾನ ತಂಡದ ಮಾಜಿ ಆಲ್ ರೌಂಡರ್ ಬೂಮ್ ಆಫ್ರಿದಿ ನೀಡಿರುವ ಹೇಳಿಕೆ ಕ್ರೀಡಾಭಿಮಾನಿಗಳಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾ ಮುಖಿಯಾಗಲಿರುವ ಇಂಡಿಯಾ-ಪಾಕಿಸ್ತಾನ ಪಂದ್ಯದಲ್ಲಿ ಸಮತೋಲನದಿಂದ ಕೂಡಿರುವ ಭಾರತ ತಂಡ ಗೆಲ್ಲಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಎಲ್ಲರ ಅಚ್ಚರಿಗೆ ಕಾರಣವಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಬಲಿಷ್ಠವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆ ಹೊಂದಿದೆ.
ಭಾರತದ ಬ್ಯಾಟ್ಸ್ ಮನ್ ಗಳನ್ನು ಕಟ್ಟಿ ಹಾಕುವುದು ಅಷ್ಟು ಸುಲಭದ ಮಾತಲ್ಲ ಎಂದಿರುವ ಆಫ್ರಿದಿ, ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವ ಕೊಹ್ಲಿಯನ್ನು ಕಟ್ಟಿ ಹಾಕಿದಾಗ ಮಾತ್ರ ಪಾಕಿಸ್ತಾನ ಗೆಲ್ಲಬಹುದು ಎಂದರು.
Comments