ಮಹಿಳಾ ತಂಡಕ್ಕೆ ಶುಭಕೋರಿದ ವಿರಾಟ್ ಕೊಹ್ಲಿ
ಐಸಿಸಿ ವಿಶ್ವಕಪ್ ಮಹಿಳಾ ಕ್ರಿಕೆಟ್ 2017 ಟೂರ್ನಿಯಲ್ಲಿ ಆಡಲಿರುವ ಭಾರತದ ಮಹಿಳಾ ತಂಡಕ್ಕೆ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ
ನವ ದೆಹಲಿ: ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಮಹಿಳಾ ಕ್ರಿಕೆಟ್ 2017 ಟೂರ್ನಿಯಲ್ಲಿ ಆಡಲಿರುವ ಭಾರತದ ಮಹಿಳಾ ತಂಡಕ್ಕೆ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ. ಇಂದಿನಿಂದ ಮಹಿಳಾ ವಿಶ್ವಕಪ್ ಪಂದ್ಯ ಆರಂಭವಾಗಲಿದ್ದು, ಇಂಗ್ಲೆಂಡ್ ತಂಡವನ್ನು ಭಾರತ ಎದುರಿಸಲಿದೆ.
ಮಿಥಾಲಿ ರಾಜ್ ಟೀಮ್ ಗೆ ವಿಡಿಯೋ ಸಂದೇಶ ರವಾನೆ ಮಾಡಿರುವ ಕೊಹ್ಲಿ, ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಈ ಸಂದೇಶದ ಕುರಿತು ಬಿಸಿಸಿಐನ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದ್ದು, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳುಹಿಸಿರುವ ಸಂದೇಶವನ್ನು ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ. ಕೊಹ್ಲಿ ಸಂದೇಶಕ್ಕೆ ಪ್ರತಿಕ್ರಿಯೆ ನೀಡಿರುವ ಮಿಥಾಲಿ ರಾಜ್ ತಂಡ ಧನ್ಯವಾದ ಸಲ್ಲಿಸಿದೆ. 1978ರಿಂದ ಇಲ್ಲಿಯವರೆಗೆ ಭಾರತ ತಂಡವು ಒಮ್ಮೆಯೂ ವಿಶ್ವಕಪ್ ಗೆದ್ದಿಲ್ಲ. 2005ರಲ್ಲಿ ರನ್ನರ್ಸ್ ಅಪ್ ಆಗಿದ್ದು ಮಾತ್ರ ಇಲ್ಲಿಯವರೆಗಿನ ಶ್ರೇಷ್ಠ ಸಾಧನೆಯಾಗಿದೆ.
Comments