ನಾಳೆ ಗೆಲುವು ನಮ್ಮದೇ !!
ಕೋಲ್ಕತ್ತಾ: ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದಲ್ಲಿ ಭಾರತವೇ ಗೆಲ್ಲುವ ವಿಶ್ವಾಸ ನಮಗಿದೆ, ಇಂಗ್ಲೆಂಡ್ ವಿರುದ್ಧ ಭಾರತ ಜಯ ಸಾಧಿಸಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಡನ್ ಗಾರ್ಡನ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಗಂಗೂಲಿ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸ್ಫೋಟಕ 171 ರನ್ ಬಾರಿಸಿದ ಟೀಂ ಇಂಡಿಯಾ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಆಟವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ಆಸೀಸ್ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಆಟ ನಿಜಕ್ಕೂ ಅತ್ಯುತ್ತಮವಾಗಿತ್ತು. ಅದರಂತೆ ಭಾನುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತದ ವನಿತೆಯರು ಜಯಶಾಲಿಗಳಾಗಲಿದ್ದಾರೆ ಎಂದು ಹೇಳಿದರು.
Comments