ಕರಾಟೆಯಲ್ಲಿ ಚಿನ್ನದ ಪದಕ ಮುಡಿಗೇರಿಕೊಂಡ ಮೇಯರ್

ಕವಿತಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದ್ದಾರೆ. ಕರಾಟೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಅವರು ಚುನಾವಣೆ ರಾಜಕೀಯ, ಸಂಸಾರದ ಜವಾಬ್ದಾರಿಯ ನಡುವೆಯೂ ಮತ್ತೆ ಚಾಂಪಿಯನ್ ಆಗುವ ಮೂಲಕ ಗಮನ ಸೆಳೆದಿದ್ದಾರೆ.
ಮಂಗಳೂರು ಮೇಯರ್ ಕವಿತಾ ಸನಿಲ್ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ 65 ಕೆ.ಜಿ. ಮೇಲಿನ ಮಹಿಳಾ ವಿಭಾಗದ ಬ್ಲ್ಯಾಕ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಅವರು ಚಿನ್ನದ ಪದಕ ಗಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಪಂದ್ಯಾವಳಿ ಉದ್ಘಾಟನೆಯ ಸಂದರ್ಭದಲ್ಲಿ ಮೇಯರ್ ಕವಿತಾ ಅವರಿಗೆ ತಮಾಷೆಯಿಂದ ಪಂಚ್ ನೀಡಿದ್ದು ಭಾರೀ ಸುದ್ದಿಯಾಗಿತ್ತು. ಈ ಪಂದ್ಯಾವಳಿಯಲ್ಲಿ ಕವಿತಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದ್ದಾರೆ. ಕರಾಟೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಅವರು ಚುನಾವಣೆ ರಾಜಕೀಯ, ಸಂಸಾರದ ಜವಾಬ್ದಾರಿಯ ನಡುವೆಯೂ ಮತ್ತೆ ಚಾಂಪಿಯನ್ ಆಗುವ ಮೂಲಕ ಗಮನ ಸೆಳೆದಿದ್ದಾರೆ.
Comments