ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಪ್ರವಾಸಿ ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕೇಪ್ ಟೌನ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯರ ವಿರುದ್ಧ 72 ರನ್ ಗಳ ವಿರೋಚಿತ ಸೋಲು ಅನುಭವಿಸಿರುವ ಕೊಹ್ಲಿ ಪಡೆ ಈ ಪಂದ್ಯವನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದು, ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲಿರುವ ಡುಪ್ಲೆಸಿಸ್ ಪಡೆ ಎರಡನೇ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಪ್ರಭುತ್ವ ಸಾಧಿಸಲು ಹವಣಿಸಿದೆ.
ಹೀಗಾಗಿ ಮೊದಲ ಪಂದ್ಯದಂತೆ ಈ ಪಂದ್ಯವೂ ಕೂಡ ಕದನ ಕುತೂಹಲಕಾರಿಯಾಗಿರುವುದರಲ್ಲಿ ಎರಡು ಮಾತಿಲ್ಲ. ಇನ್ನು ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಪಾರ್ಥಿವ್ ಪಟೇಲ್, ಕೆಎಲ್ ರಾಹುಲ್, ಇಶಾಂತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾ ತಂಡ ಕೇಪ್ ಟೌನ್ ನಲ್ಲಿ ಆಡಿದ್ದ ತಂಡವನ್ನೇ ಮುಂದುವರೆಸಿದೆ.
Comments