ಮೂರು ವಿಶ್ವಕಪ್ ಗಳನ್ನು ಗೆದ್ದ ಓರ್ವ ಯಶಸ್ವಿ ಕ್ರಿಕೆಟಿಗ ಯಾರು ಗೊತ್ತೇ ?

2000ರಲ್ಲಿ ಶ್ರೀಲಂಕಾದಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ ಭಾರತ ಚೊಚ್ಚಲ ಪ್ರಶಸ್ತಿ ಜಯಿಸಲು ನೆರವಾಗಿದ್ದ ಯುವರಾಜ್ ಸರಣಿ ಶ್ರೇಷ್ಠ ಪ್ರಶಸ್ತಿ ಜಯಿಸಿದ್ದರು. 2007ರಲ್ಲಿ ಟ್ವೆಂಟಿ-20 ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರವಹಿಸಿರುವ ಯುವರಾಜ್ 2011ರಲ್ಲಿ ಭಾರತದಲ್ಲಿ ನಡೆದ ಪ್ರತಿಷ್ಠಿತ ಏಕದಿನ ವಿಶ್ವಕಪ್ ಪ್ರಶಸ್ತಿ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಹಸಕ್ಕೆ ಸರಣಿಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು.
ಅಂಡರ್-12, ಅಂಡರ್-14 ವಯೋಮಿತಿಯ ಪಂದ್ಯದಲ್ಲಿ ಓರ್ವ ಯಶಸ್ವಿ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ಯುವರಾಜ್ ಸಿಂಗ್ ಅಂಡರ್-19 ವಿಶ್ವಕಪ್, ಟ್ವೆಂಟಿ-20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಟ್ರೋಫಿಯನ್ನು ಜಯಿಸಿರುವ ಭಾರತದ ಏಕೈಕ ಕ್ರಿಕೆಟಿಗನಾಗಿದ್ದಾರೆ. ಅಂಡರ್-19 ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಯುವರಾಜ್ 2000ರಲ್ಲಿ ನಡೆದ ಐಸಿಸಿ ನಾಕೌಟ್ ಟೂರ್ನಿಯಲ್ಲಿ ಅವಕಾಶ ಪಡೆದಿದ್ದರು. ಟೂರ್ನಿಯ ಕ್ವಾರ್ಟರ್ ಫೈನಲ್ನಲ್ಲಿ ಆಸ್ಟ್ರೇಲಿಯದ ಗ್ಲೆನ್ ಮೆಕ್ಗ್ರಾತ್, ಬ್ರೆಟ್ ಲೀ ಹಾಗೂ ಜೇಸನ್ ಗಿಲ್ಲೆಸ್ಪಿ ದಾಳಿಯನ್ನು ದಿಟ್ಟವಾಗಿ ಎದುರಿಸಿದ್ದ ಯುವಿ 80 ಎಸೆತಗಳಲ್ಲಿ 84 ರನ್ ಗಳಿಸಿದ್ದರು. ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನ ಬ್ಯಾಟಿಂಗ್ ಸ್ಟಾರ್ ಆಗಿ ಹೊರಹೊಮ್ಮಿದ್ದರು.
Comments