ಕಾಂಗ್ರೆಸ್ ಮುಖಂಡ ಜೆಡಿಎಸ್ ಸೇರ್ಪಡೆ..!!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 15 ಮಹಿಳೆಯರಿಗೆ ಪಕ್ಷದಿಂದ ಟಿಕೆಟ್ ನೀಡುತ್ತಿರುವುದಾಗಿ ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸಂಡೂರಿನಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಿದ್ದೇವೆ. ನಾನು ಇನ್ನೂ 22 ದಿನ 40 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ. ರಾಯಚೂರಿನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕ ಕ್ಷೇತ್ರಗಳಿಗೆ ತಾವು ಹೆಚ್ಚು ಭೇಟಿ ನೀಡಿ, ಇಲ್ಲಿ ಐವತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಹೊಂದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಜೆಡಿಎಸ್ ಪಕ್ಷ ಕವಲು ದಾರಿಯಲ್ಲಿತ್ತು. ಜಿಲ್ಲೆಯಲ್ಲಿ ಈಗ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಯುಗಾದಿಯೊಳಗೆ ಘೋಷಿಸುತ್ತೇವೆ. ಕಾಂಗ್ರೆಸ್ ಮುಖಂಡ ಇಕ್ಬಾಲ್ ಹೊತ್ತೂರು ನಮ್ಮ ಪಕ್ಷವನ್ನು ಸೇರಿದ್ದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್‌ನಲ್ಲಿ ಹಣ ತಂದು ಚುನಾವಣೆ ಮಾಡಲು ಸಾಧ್ಯವಿಲ್ಲ. ದೊಡ್ಡ ಮಟ್ಟದ ನಾಯಕರು ಬೇರೆ ಪಕ್ಷದಿಂದ ಬರುವವರು ಯಾರು ಇಲ್ಲ. ಬೇರೆ ಪಕ್ಷಗಳಲ್ಲಿ ಅಸಮಾಧಾನಗೊಂಡವರಿಗೆ ಈ ಬಾರಿ ನಮ್ಮಲ್ಲಿ ಅವಕಾಶವಿಲ್ಲ. ಬಿಜೆಪಿ ಕಾಂಗ್ರೆಸ್ ಎರಡು ಕೂಡ ನಿರಾಶ್ರಿತರ ಕೇಂದ್ರಗಳು. ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ನ ಬಹುತೇಕ ನಾಯಕರು ಜೆಡಿಎಸ್‍ನಿಂದ ವಲಸೆ ಹೋದವರೇ ಆಗಿದ್ದಾರೆ. ಅವರು ನಮ್ಮ ಪಕ್ಷದಲ್ಲಿ ದೊಡ್ಡವರಾಗಿ ಶಕ್ತಿ ಬಂದ ಕೂಡಲೇ ರಾಷ್ಟ್ರೀಯ ಪಕ್ಷಕ್ಕೆ ಹಾರುತ್ತಾರೆ ಎಂದು ಎಚ್ ಡಿಕೆ ಟೀಕಿಸಿದರು
Comments