ಧೋನಿ ಕಾಲಿಗೆ ಬಿದ್ದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿ

21 Apr 2018 6:07 PM | Sports
566 Report

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿದ್ದು ಚೆನ್ನೈ ಅಭಿಮಾನಿಗಳ ಅಭಿಮಾನ ಮತ್ತಷ್ಟು ಹೆಚ್ಚಾಗಿದೆ.

ಪುಣೆಯಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಬಂದ ಎಂಎಸ್ ಧೋನಿಗೆ ಅಭಿಮಾನಿಯೊಬ್ಬ ಕಾಲಿಗೆ ಬಿದ್ದಿರುವ ವಿಡಿಯೋ ಇದೀಗ ವೈರಲ್ ಆಗಿದೆ.ಈ ಪಂದ್ಯದಲ್ಲಿ ಶೇನ್ ವಾಟ್ಸನ್ ಅಬ್ಬರದ ಶತಕದ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ 64 ರನ್ ಗಳಿಂದ ಜಯವನ್ನು ಸಾಧಿಸಿತು.ಮ್ಯಾಚ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಎರಡು ವರ್ಷ ನಿಷೇಧಕ್ಕೆ ಒಳಗಾಗಿದ್ದ ಸಿಎಸ್ಕೆ ತಂಡ ಪ್ರಸ್ತುತ ಆವೃತ್ತಿಯಿಂದ ಐಪಿಎಲ್ ಗೆ ಸೇರ್ಪಡೆಗೊಂಡಿದೆ. ಈ ಬಾರಿ ಐಪಿಎಲ್ ಕಪ್ ಯಾರ ಪಾಲಿಗೆ ಅನ್ನೋದನ್ನ ಇನ್ನೂ ಸ್ವಲ್ಪ ದಿನ ಕಾದು ನೋಡಲೆ ಬೇಕು.

 

 

Edited By

Manjula M

Reported By

Manjula M

Comments