ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್..! ಆದರೆ ಇನ್ನು 10 ವರ್ಷಗಳ ಕಾಲ ಕಾಯಬೇಕು
ಒಲಿಂಪಿಕ್ ಕ್ರೀಡಾಕೂಟದಲ್ಲಿ ಕೊನೆಗೂ ಕ್ರಿಕೆಟ್ ಮರಳುವ ಸಾಧ್ಯತೆ ಹೆಚ್ಚಾಗಿದೆ.. 2028ರ ಲಾಸ್ ಏಂಜಲೀಸ್ನಲ್ಲಿ ನಡೆಯುವ ಒಲಿಂಪಿಕ್ಸ್'ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಪ್ರಯತ್ನ ಆರಂಭವಾಗಿದೆ ಎಂದು ಐಸಿಸಿ ಸಿಇಓ ರಿಚರ್ಡ್‌ಸನ್ ಹೇಳಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಜಿ ಸಲ್ಲಿಸಲು ಈಗಾಗಲೇ ಸಮಯ ಮುಗಿದಿದ್ದು, 2028ರ ಕ್ರೀಡಾಕೂಟಕ್ಕೆ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಒಲಿಂಪಿಕ್ಸ್'ನಲ್ಲಿ ಪಾಲ್ಗೊಳ್ಳುವ ಬಗ್ಗೆ ಬಿಸಿಸಿಐ ತಕರಾರನ್ನು ತೆಗೆದಿದೆ ಎಂದು ತಿಳಿಸಿದ್ದಾರೆ. ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಾದರೆ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿಯಾಗುವುದಂತೂ ಖಂಡಿತ.
Comments