ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 15 ರನ್ ಗಳ ಜಯ

ನೆನ್ನೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಪಂಜಾಬ್-ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 15 ರನ್ ಗಳ ಜಯವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 158 ರನ್ ಪಡೆದುಕೊಂಡಿತು. ಪಂಜಾಬ್ ಬೌಲರ್ ಗಳನ್ನು ಎಡಬಿಡದೆ ಕಾಡಿದ ಜೋಸ್ ಬಟ್ಲರ್ 58 ಎಸೆತಗಳಲ್ಲಿ 82 ರನ್ ಗಳಿಸಿ ತಂಡ 158 ರನ್ ಗಳಿಸಲು ನೆರವಾದರು. ನಂತರ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ತಂಡದ ಪರ ಕೆಎಲ್ ರಾಹುಲ್ ಏಕಾಂಗಿ ಹೋರಾಟವನ್ನು ನಡೆಸಿದರು. ಆದರೆ ಉಳಿದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದ ಪರಿಣಾಮ ರಾಹುಲ್ ಅವರ ಏಕಾಂಗಿ ಹೋರಾಟ ವ್ಯರ್ಥವಾಯಿತು
Comments