ಶಾರುಕ್ ಗೆ ಶಾಕ್ ಕೊಟ್ಟ ಕೋಲ್ಕತ್ತಾ ನೈಟ್ ರೈಡರ್ಸ್..!

ನೆನ್ನೆ ರಾತ್ರಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಕ್ವಾಲಿಫೈಯರ್ ಪಂದ್ಯ ದಲ್ಲಿ 13 ರನ್ ಗಳ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಜಯವನ್ನು ಸಾಧಿಸಿದೆ.
ಈ ಮೂಲಕ ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ನ ಫೈನಲ್ ಗೆ ಲಗ್ಗೆ ಇಟ್ಟಿದೆ. ಭಾನುವಾರದಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ ಎದುರಿಸಲಿದೆ. ತಮ್ಮ ತಂಡ ಫೈನಲ್ ಪ್ರವೇಶಿಸುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರೂಕ್ ಖಾನ್ ಗೆ ಶುಕ್ರವಾರ ನಡೆದ ಪಂದ್ಯ ತೀವ್ರ ನಿರಾಸೆಯನ್ನು ಮೂಡಿಸಿದೆ.
Comments