ಕಬಡ್ಡಿಯಲ್ಲಿ ಬೆಳ್ಳಿ ಗೆದ್ದ ಉಷಾರಾಣಿಯವರಿಗೆ 15 ಲಕ್ಷ ರೂ.ಚೆಕ್ ನೀಡಿ ಗೌರವಿಸಿದ ಡಿಸಿಎಂ ಪರಮೇಶ್ವರ್

ಇಂಡೋನೇಷ್ಯಾದಲ್ಲಿ ನಡೆದಂತಹ ಏಷ್ಯನ್ ಗೇಮ್ಸ್ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದ ಉಷಾರಾಣಿ ಅವರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ 15 ಲಕ್ಷ ರೂ. ಚೆಕ್ ಅನ್ನು ನೀಡಿದರು.
ಸದಾಶಿವನಗರದ ಬಿಡಿಎ ಕ್ವಾಟ್ರಸ್ ನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಏಷ್ಯನ್ ಗೇಮ್ಸ್ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದ ಉಷಾರಾಣಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಪರಮೇಶ್ವರ್, ಪೊಲೀಸ್ ಇಲಾಖೆಯಲ್ಲಿ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿದ್ದಾರೆ, ಅಷ್ಟೆ ಅಲ್ಲದೆ ಇಡೀ ದೇಶಕ್ಕೆ ಕೀರ್ತಿಯನ್ನು ತಂದಿದ್ದಾರೆ. ಇವರ ಸಾಧನೆಗೆ ಕ್ರೀಡಾ ಇಲಾಖೆ ವತಿಯಿಂದ 15 ಲಕ್ಷ ರೂ. ಚೆಕ್ ನೀಡಿ ಪ್ರೋತ್ಸಾಹಿಸಲಾಗಿದೆ ಎಂದು ತಿಳಿಸಿದರು.
Comments