ವಿರಾಟ್ ಕೊಹ್ಲಿಯ ಮತ್ತೊಂದು ಸಾಧನೆಯ ದಾಖಲೆ
ವಿರಾಟ್ ಕೊಹ್ಲಿ ಎಂದರೆ ಸಾಕು ಕ್ರಿಕೇಟ್ ಅಭಿಮಾನಿಗಳಿಗೆ ತುಂಬಾ ಕ್ರೇಜ್.. ಚಿಕ್ಕ ವಯಸ್ಸಿನಲ್ಲಿಯೇ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ರೆಕಾರ್ಡ್ ಬ್ರೇಕ್ ಮಾಡೋದು ಇತ್ತಿಚಿಗೆ ಕಾಮನ್ ಆಗ್ಬಿಟ್ಟಿದೆ. ಪ್ರತಿ ಪಂದ್ಯದಲ್ಲೂ ಕೂಡ ಒಂದಿಲ್ಲೊಂದು ದಾಖಲೆಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಒಂದ್ಯದಲ್ಲಿ ಹೊಸ ಸಾಧನೆ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸತತ 3ನೇ ವರ್ಷದಲ್ಲೂ 1000 ರನ್ ಪೂರೈಸಿದ ಭಾರತದ ಏಕೈಕ ಆಟಗಾರ ಎಂಬ ಕೀರ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ವಿಂಡೀಸ್ ವಿರುದ್ಧದ ಟೆಸ್ಟ್ನ ಎರಡನೇ ದಿನದಾಟದಲ್ಲಿ ತಮ್ಮ 24 ನೇ ಶತಕ ದಾಖಲಿಸುವ ಮೂಲಕ ಒಂದು ವರ್ಷದಲ್ಲಿ 1000 ರನ್ ಅನ್ನು ವಿರಾಟ್ ಕೊಹ್ಲಿ ಪೂರೈಸಿದರು. ಅಲ್ಲದೆ ಅತಿ ವೇಗವಾಗಿ 24ನೇ ಶತಕ ದಾಖಲಿಸಿದ ವಿಶ್ವದ ಎರಡನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರಾಡ್ಮನ್ ಮೊದಲ ಸ್ಥಾನದಲ್ಲಿದ್ದಾರೆ. ಇದರಿಂದ ವಿರಾಟ್ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಲ್ಲಿದ್ದಾರೆ.
Comments